Sunday, June 7, 2026
Homeಚಿಕ್ಕಮಗಳೂರುಚಿಕ್ಕಮಗಳೂರು; ಅನುಮಾನಾಸ್ಪದ ರೀತಿಯಲ್ಲಿ ಯುವಕ ಹಾಗೂ ಯುವತಿಯ ಶವ ಪತ್ತೆ

ಚಿಕ್ಕಮಗಳೂರು; ಅನುಮಾನಾಸ್ಪದ ರೀತಿಯಲ್ಲಿ ಯುವಕ ಹಾಗೂ ಯುವತಿಯ ಶವ ಪತ್ತೆ

- Advertisement -
- Advertisement -

ಚಿಕ್ಕಮಗಳೂರು; ಅನುಮನಾಸ್ಪದ ರೀತಿಯಲ್ಲಿ ಯುವಕ ಹಾಗೂ ಯುವತಿಯ ಶವ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿಯ ಗ್ರಾಮದಲ್ಲಿ ನಡೆದಿದೆ.


ಇಬ್ಬರೂ ಬೆಂಗಳೂರು ಮೂಲದವರು ಎಂದು ಹೇಳಲಾಗಿದೆ. ಆದರೆ ಇಬ್ಬರ ಶವ ಪತ್ತೆಯಾಗಿರುವ ರೀತಿ ಮಾತ್ರ ಅನುಮಾನಾಸ್ಪದವಾಗಿದೆ. ಯುವತಿ ಕಾರಿನಲ್ಲಿ ಸಾವನ್ನಪ್ಪಿದ್ದಾಳೆ. ಯುವಕನ ಮೃತದೇಹ ಕಾರು ನಿಂತ ಜಾಗದ ಪಕ್ಕದ ಮರದಲ್ಲಿ ಪತ್ತೆಯಾಗಿವೆ. ಇಬ್ಬರ ವಯಸ್ಸು ಅಂದಾಜು 25-30ರ ಒಳಗಿದ್ದು, ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ.

ಯುವತಿಯ ಕುತ್ತಿಗೆಯಲ್ಲಿ ಕತ್ತು ಹಿಸುಕಿರುವ ಗುರುತು ಇದೆ. ಯುವಕ ಕಾರು ನಿಂತ ಜಾಗದ ಪಕ್ಕದ ಮರಕ್ಕೆ ವೇಲ್‌ನಿಂದ ನೇಣು ಹಾಕಿಕೊಂಡಿದ್ದಾನೆ. ಅಲ್ಲದೆ ಕಾರು ಕೂಡ ರಸ್ತೆಯಲ್ಲಿ ನಿಂತಿಲ್ಲ. ರಸ್ತೆ ಬದಿಯ ಪಕ್ಕದ ಚರಂಡಿಗೆ ಎರಡು ಚಕ್ರಗಳು ಇಳಿದಿದ್ದು ಕಾರು ಚರಂಡಿಗೆ ಏಕೆ? ಹೇಗೆ ಇಳಿಯಿತು ಎಂಬ ಪ್ರಶ್ನೆ ಮೂಡಿದೆ. ಕಾರು ಮೂಲತಃ ಬೆಂಗಳೂರು ನೋಂದಣಿಯದ್ದಾಗಿದ್ದು, ಎಲ್ಲೋ ಬೋರ್ಡ್ ಗಾಡಿಯಾಗಿದೆ. ಮೇಲ್ನೋಟಕ್ಕೆ ಮೃತ ಯುವಕ ಡ್ರೈವರ್ ಇರಬಹುದು ಎಂದು ಅಂದಾಜಿಸಲಾಗಿದ್ದು, ಮೂಲತಃ ಬೆಂಗಳೂರಿನ ಮಾಗಡಿಯವನು ಎಂದು ತಿಳಿದು ಬಂದಿದೆ. ಯುವತಿ ಎಲ್ಲಿಯವಳು ಎಂಬ ಮಾಹಿತಿ ಲಭ್ಯವಾಗಿಲ್ಲ.

- Advertisement -

Latest News

error: Content is protected !!