Sunday, June 14, 2026
Homeಕರಾವಳಿಮಂಗಳೂರುಮಂಗಳೂರು: ಕಾರಿನಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದಾತ ಅಂದರ್

ಮಂಗಳೂರು: ಕಾರಿನಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದಾತ ಅಂದರ್

- Advertisement -
- Advertisement -

ಮಂಗಳೂರು: ಕಾರಿನಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದಾತನನ್ನು ಪೊಲೀಸರು ಬಂಧಿಸಿರುವ ಘಟನೆ ಮುಲ್ಕಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಮಲ್ಪೆ ನಿವಾಸಿ ಮೊಹಮ್ಮದ್ ಸಲೀಂ(38) ಬಂಧಿತ ಆರೋಪಿ.

ಮೊಹಮ್ಮದ್ ಸಲೀಂ ಮುಲ್ಕಿ ಸಮೀಪದ ಬಪ್ಪನಾಡು ಚೆಕ್ ಪೋಸ್ಟ್ ಬಳಿ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಕಾರಿನಲ್ಲಿ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಆತನನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಕಾರಿನಲ್ಲಿದ್ದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಈತ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ರಿಜ್ ಕಾರಿನಲ್ಲಿ ಮಾದಕ ವಸ್ತುಗಳನ್ನು ಕಾರಿನ ಡ್ಯಾಶ್ ಬಾಕ್ಸ್ ನಲ್ಲಿ ಇರಿಸಿ ಸಾರ್ವಜನಿಕರಿಗೆ ಮಾರಾಟ ಮಾಡಲು ಸಾಗಿಸುತ್ತಿದ್ದ ಎನ್ನಲಾಗಿದೆ.ಚೆಕ್ ಪೋಸ್ಟ್ ಬಳಿ ಪೊಲೀಸ್ ಇನ್ಸೆಕ್ಟರ್ ಅನಿತಾ ಹಾಗೂ ಪೋಲಿಸ್ ಸಿಬ್ಬಂದಿ ತಪಾಸಣೆ ನಡೆಸುತ್ತಿದ್ದಾಗ ಆರೋಪಿ ಚಾಲಕ ಕಾರು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾನೆ. ಕೂಡಲೇ ಅಲರ್ಟ್ ಆದ ಪೊಲೀಸರು ಆರೋಪಿಯನ್ನು ಕಾರು ಸಮೇತ ಬಂಧಿಸಿ ಕಾರಿನಲ್ಲಿದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರಿನಲ್ಲಿ ಎಂಡಿಎoಎ, ಹೈಡೋ ವೀಡ್ ಗಾಂಜಾ, ಸಹಿತ ಅನೇಕ ವಸ್ತುಗಳನ್ನು ಪತ್ತೆಯಾಗಿವೆ.ಪೊಲೀಸರು ಬಂಧಿತ ಆರೋಪಿಯ ವಿಚಾರಣೆ ನಡೆಸಿದ್ದಾರೆ.

- Advertisement -

Latest News

error: Content is protected !!