Monday, June 8, 2026
Homeಕರಾವಳಿಕಾಸರಗೋಡುಕಾಸರಗೋಡು: ಮಹಿಳೆಯ ತಾಳಿ ಸರ ಕದ್ದಿದ್ದ ಆರೋಪಿಗಳ ಬಂಧನ

ಕಾಸರಗೋಡು: ಮಹಿಳೆಯ ತಾಳಿ ಸರ ಕದ್ದಿದ್ದ ಆರೋಪಿಗಳ ಬಂಧನ

- Advertisement -
- Advertisement -

ಕಾಸರಗೋಡು: ಮಹಿಳೆಯ ತಾಳಿ ಸರ ಕದ್ದಿದ್ದ ಇಬ್ಬರು ಆರೋಪಿಗಳನ್ನು ಬದಿಯಡ್ಕ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪುತ್ತೂರಿನ ಕುಂಜೂರು ಪಂಜ ನಿವಾಸಿ ಶಂಸುದ್ದೀನ್ (28) ಹಾಗೂ ಬನ್ನೂರು ನಿವಾಸಿ ನೌಷಾದ್ ಬಿ.ಎ.(37)ಬಂಧಿತರು.

ಜ.11 ರಂದು ಸಾಯಂಕಾಲ 3.30ರ ಸುಮಾರಿಗೆ ಕಾಸರಗೋಡು ಜಿಲ್ಲೆಯ ಬದಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ನೀರ್ಚಾಲು ಮೇಲಿನ ಪೇಟೆಯಲ್ಲಿ ಈ ಘಟನೆ ನಡೆದಿತ್ತು.ನಿರ್ಚಾಲು ಮೇಲಿನ ಪೇಟೆಯಲ್ಲಿರುವ ಜೇನುಮೂಲೆ ದಿ. ಡಾ.ಶಂಕರನಾರಾಯಣ ಭಟ್ ರವರ ಪತ್ನಿ ಸರೋಜಿನಿ ಎಸ್.ಎನ್.ರವರ ಮಾಲಕತ್ವದ ರಾಘವೇಂದ್ರ ಆಯುರ್ವೇದ ಮೆಡಿಕಲ್‌ಗೆ ಬೈಕ್‌ನಲ್ಲಿ ಬಂದ ಇಬ್ಬರು ಯುವಕರ ಪೈಕಿ ಒಬ್ಬಾತ ಮೆಡಿಕಲ್‌ಗೆ ಬಂದು ಎದೆ ನೋವಿಗೆ ಔಷದ ಬೇಕೆಂದು ಕೇಳಿದನೆನ್ನಲಾಗಿದೆ. ಔಷಧಿ‌ ನೀಡುವ‌ ಮದ್ಯೆ ಯುವಕ ಸರೋಜಿನಿ ಅವರ ಕತ್ತಿನಲ್ಲಿದ್ದ ಮೂರೂವರೆ ಪವನ್ ತೂಕದ ಚಿನ್ನದ ಕರಿಮಣಿ ಎಗರಿಸಿ ಬೈಕ್‌ನಲ್ಲಿ ಪರಾರಿಯಾಗಿದ್ದರು.

ಈ ಬಗ್ಗೆ ಮಹಿಳೆ ನೀಡಿದ ದೂರಿನಂತೆ ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು. ವಿವಿಧ ಕಡೆಗಳ ಸಿಸಿ ಟಿ.ವಿ. ಫುಟೇಜ್‌ಗಳ ಆಧಾರದಲ್ಲಿ ತನಿಖೆ ನಡೆಸಿದ್ದ ಪೊಲೀಸರು ಆರೋಪಿಗಳ ಜಾಡುಹಿಡಿಯುವಲ್ಲಿ ಸಫಲರಾಗಿದ್ದಾರೆ.

ಇದೀಗ ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಿರುವ ಪೊಲೀಸರು ಕಳವುಗೈದ‌ ಚಿನ್ನಾಭರಣವನ್ನು ಮಂಗಳೂರಿನ ಚಿನ್ನದ ಅಂಗಡಿಯೊಂದಕ್ಕೆ ಮಾರಾಟ ಮಾಡಿದ್ದು,‌ ಅಲ್ಲಿಂದ ಪೊಲೀಸರು ವಶಪಡಿಸಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!