- Advertisement -
![]()
- Advertisement -
ಬೆಂಗಳೂರು: ಪ್ರಜಾಪ್ರಭುತ್ವದಲ್ಲಿ ಶೋಷಿತ ಸಮುದಾಯದವರು ಮುಖ್ಯಮಂತ್ರಿ ಆಗಲೇಬೇಕು ಎಂದು ಉರಿಲಿಂಗ ಪೆದ್ದಿಮಠದ ಶ್ರೀ ಜ್ಞಾನಪ್ರಕಾಶ್ ಸ್ವಾಮೀಜಿಯವರು ಆಗ್ರಹಿಸಿದ್ದಾರೆ.
ಕಾಂಗ್ರೆಸ್‌ನಲ್ಲಿ ದಲಿತ ಸಿಎಂ ಚರ್ಚೆ ಬೆನ್ನಲ್ಲೇ ಜ್ಞಾನಪ್ರಕಾಶ್ ಸ್ವಾಮೀಜಿ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಅವರು ಮಾಧ್ಯಮಗಳಿಗೆ ಹೀಗೆ ಪ್ರತಿಕ್ರಿಯಿಸಿದ್ದಾರೆ.
“ದಲಿತ ಸಿಎಂ ಆಗಲೇಬೇಕು. ಈ ಮೂಲಕ ಸಾಮಾಜಿಕ ನ್ಯಾಯ ಸಿಗಲಿ ಅನ್ನೋದೇ ನಮ್ಮ ಉದ್ದೇಶ. ಶೋಷಿತ ಸಮುದಾಯದವರು ಯಾರೇ ಆದರೂ ಸಿಎಂ ಆಗಲಿ. ಇನ್ನು ಜಾತಿಗಣತಿ ಕೂಡ ಆದಷ್ಟು ಬೇಗ ಬಿಡುಗಡೆ ಆಗಲೇಬೇಕು ಎಂದು ಅವರು ಆಗ್ರಹಿಸಿದ್ದಾರೆ.
- Advertisement -


