Thursday, June 4, 2026
Homeಕರಾವಳಿಮಂಗಳೂರುಮಂಗಳೂರಿನಲ್ಲಿ ನಕಲಿ ಮಂಗಳಮುಖಿಯರ ಹಾವಳಿ; ಮಂಗಳಮುಖಿಯರಂತೆ ವೇಷ ಧರಿಸಿ ಭಿಕ್ಷಾಟನೆ ಮತ್ತು ವೇಶ್ಯಾವಾಟಿಕೆ

ಮಂಗಳೂರಿನಲ್ಲಿ ನಕಲಿ ಮಂಗಳಮುಖಿಯರ ಹಾವಳಿ; ಮಂಗಳಮುಖಿಯರಂತೆ ವೇಷ ಧರಿಸಿ ಭಿಕ್ಷಾಟನೆ ಮತ್ತು ವೇಶ್ಯಾವಾಟಿಕೆ

- Advertisement -
- Advertisement -

ಮಂಗಳೂರಿನಲ್ಲಿ ನಕಲಿ ಮಂಗಳಮುಖಿಯರ ಹಾವಳಿ ಜೋರಾಗಿದೆ. ಹೊರ ರಾಜ್ಯದ ಮಹಿಳೆಯರು ಮಂಗಳಮುಖಿಯರಂತೆ ವೇಷ ಧರಿಸಿ ಭಿಕ್ಷಾಟನೆ ಮತ್ತು ವೇಶ್ಯಾವಾಟಿಕೆ ಮಾಡುತ್ತಿರೋದು ಬೆಳಕಿಗೆ ಬಂದಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಜಿಲ್ಲಾ ಪಂಚಾಯಿತಿ ಸಿಇಒ ಅವರು ಸೂಚಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನಲ್ಲಿ ಸೋಮವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಜಿಲ್ಲಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಕಲಿ ತೃತೀಯಲಿಂಗಿಗಳ ಹಾವಳಿ ಹೆಚ್ಚಾಗಿದೆ. ಹೀಗಾಗಿ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು. ತೃತೀಯಲಿಂಗಿಗಳಿಗೆ ಗುರುತು ಚೀಟಿಗಳಿಗೆ ನೋಂದಾಯಿಸಲು ವ್ಯಕ್ತಿಗಳ ಪರಿಶೀಲಿಸಿ ಗುರುತು ಚೀಟಿ ನೀಡಬೇಕು. ಬ್ಯಾಂಕ್‌ ಪಾಸ್‌ ಬುಕ್‌, ಪಡಿತರ ಚೀಟಿ, ವೋಟರ್‌ ಐಡಿ, ಆಧಾರ್‌ ಕಾರ್ಡ್‌, ವಿಮೆ ಯೋಜನೆ ಗಳನ್ನು ಒದಗಿಸಬೇಕು. ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ ನಿವೇಶನ ನೀಡಬೇಕು ಎಂದು ಹೇಳಿದ್ದಾರೆ.

- Advertisement -

Latest News

error: Content is protected !!