Thursday, June 4, 2026
Homeಕರಾವಳಿದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫರಂಗಿಪೇಟೆಯ ವಿದ್ಯಾರ್ಥಿ ನಾಪತ್ತೆ

ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫರಂಗಿಪೇಟೆಯ ವಿದ್ಯಾರ್ಥಿ ನಾಪತ್ತೆ

- Advertisement -
- Advertisement -

ಬಂಟ್ವಾಳ: ಫರಂಗಿಪೇಟೆಯ ವಿದ್ಯಾರ್ಥಿಯೊಬ್ಬ ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಇದೀಗ ಆತ ನಾಪತ್ತೆಯಾಗಿದ್ದಾನೆ ಎಂದು ಪ್ರಕರಣ ದಾಖಲಾಗಿದೆ.

ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಅವರ ಪುತ್ರ ದಿಗಂತ್(17) ನಾಪತ್ತೆಯಾದ ವಿದ್ಯಾರ್ಥಿಯಾಗಿದ್ದು, ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ..

ಫೆ. 25ರ ಮಂಗಳವಾರ ಸಂಜೆ ದಿಗಂತ್ ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿದ್ದಾನೆ. ಆದರೆ ದೇವಸ್ಥಾನಕ್ಕೆ ಹೋಗದೆ, ಮನೆಗೂ ಮರಳದೆ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ.

ಘಟನೆಯ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!