Saturday, June 6, 2026
Homeತಾಜಾ ಸುದ್ದಿಇಡ್ಲಿ ಪ್ರಿಯರಿಗೆ ಶಾಕಿಂಗ್ ಸುದ್ದಿ ಕೊಟ್ಟ ಆಹಾರ ಮತ್ತು ಗುಣಮಟ್ಟ ಇಲಾಖೆ ; ಇಡ್ಲಿ ತಿಂದರೆ...

ಇಡ್ಲಿ ಪ್ರಿಯರಿಗೆ ಶಾಕಿಂಗ್ ಸುದ್ದಿ ಕೊಟ್ಟ ಆಹಾರ ಮತ್ತು ಗುಣಮಟ್ಟ ಇಲಾಖೆ ; ಇಡ್ಲಿ ತಿಂದರೆ ಬರುತ್ತಂತೆ ಕ್ಯಾನ್ಸರ್

- Advertisement -
- Advertisement -

ಬೆಂಗಳೂರು: ಇಡ್ಲಿ ಪ್ರಿಯರಿಗೆ ಆಹಾರ ಮತ್ತು ಗುಣಮಟ್ಟ ಇಲಾಖೆ ಶಾಕಿಂಗ್ ಸುದ್ದಿ ಕೊಟ್ಟಿದೆ. ಬೆಂಗಳೂರಿನ ಕೆಲವು ಹೋಟೆಲ್ ಗಳಲ್ಲಿ ತಯಾರಿಸಿದ ಇಡ್ಲಿಗಳಲ್ಲಿ  ಕ್ಯಾನ್ಸರ್ ಕಾರಕಗಳು ಪತ್ತೆಯಾಗಿವೆ.

ಇತ್ತೀಚೆಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಹಾಗೂ ಆಹಾರ ಇಲಾಖೆ ಜಂಟಿಯಾಗಿ ಬೆಂಗಳೂರಿನ ವಿವಿಧೆಡೆ ಆಹಾರ ಮಳಿಗೆಗಳ ಮೇಲೆ ದಾಳಿ ನಡೆಸಿತು. 15 ದಿನಗಳ ಕಾಲ ದಾಳಿ ಮಾಡಿ 500 ಇಡ್ಲಿ ಸ್ಯಾಂಪಲ್ಸ್ ಸಂಗ್ರಹಿಸಲಾಗಿತ್ತು. ಇದರಲ್ಲಿ 35ಕ್ಕೂ ಹೆಚ್ಚು ಹೋಟೆಲ್ ಗಳ ಇಡ್ಲಿಯಲ್ಲಿ ಅಪಾಯಕಾರಿ ಅಂಶಗಳು ಪತ್ತೆಯಾಗಿವೆ. ಅಲ್ಲದೆ ಈ ಇಡ್ಲಿ ತಿನ್ನುವುದರಿಂದ ಕ್ಯಾನ್ಸರ್ ಬರುತ್ತದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಬೆಂಗಳೂರಿನ ಹಲವಡೆ ಇತ್ತೀಚೆಗೆ ಇಡ್ಲಿ ತಯಾರಿಸಲು ಬಟ್ಟೆಯ ಬದಲು ಪ್ಲಾಸ್ಟಿಕ್ ಕವರ್ ಬಳಕೆ ಮಾಡಲಾಗುತ್ತಿದೆ. ಇಡ್ಲಿ ಮಾಡುವಾಗ ಮಾತ್ರವಲ್ಲದೆ ಆಹಾರವನ್ನು ಬಡಿಸುವಾಗ ಮತ್ತು ಪ್ಯಾಕ್ ಮಾಡುವಾಗಲೂ ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ. ಪ್ಲಾಸ್ಟಿಕ್ ಹಾಳೆಯು ಶಾಖಕ್ಕೆ ಒಡ್ಡಿಕೊಂಡು ಅಪಾಯಕಾರಿ ವಸ್ತುವನ್ನು ಹೊರಸೂಸುತ್ತಿದೆ. ಇದು ಕ್ಯಾನ್ಸರ್ ಕಾರಕವಾಗಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದರು. ಇನ್ನೂ ನೂರಾರು ಇಡ್ಲಿ ಸ್ಯಾಂಪಲ್ಸ್ ವರದಿಗೆ ಕಾಯಲಾಗುತ್ತಿದೆ. ಪೂರ್ಣ ವರದಿ ಕೈಸೇರಿದ ಬಳಿಕ ಪ್ಲಾಸ್ಟಿಕ್ ಪೇಪರ್ ನಿಷೇಧಿಸಲು ಆಹಾರ ಇಲಾಖೆ ಚಿಂತನೆ ನಡೆಸಿದೆ.

- Advertisement -

Latest News

error: Content is protected !!