Wednesday, June 24, 2026
Homeತಾಜಾ ಸುದ್ದಿಹಾಸನ: ಮಾ. 15ರಿಂದ ಎಪ್ರಿಲ್ ಅಂತ್ಯದವರೆಗೆ ಶಿರಾಡಿಯಲ್ಲಿ ವಾಹನ ಸಂಚಾರ ನಿರ್ಬಂಧ ಸಾಧ್ಯತೆ

ಹಾಸನ: ಮಾ. 15ರಿಂದ ಎಪ್ರಿಲ್ ಅಂತ್ಯದವರೆಗೆ ಶಿರಾಡಿಯಲ್ಲಿ ವಾಹನ ಸಂಚಾರ ನಿರ್ಬಂಧ ಸಾಧ್ಯತೆ

- Advertisement -
- Advertisement -

ಹಾಸನ: ಮಾ. 15ರಿಂದ ಎಪ್ರಿಲ್ ಅಂತ್ಯದವರೆಗೆ ಶಿರಾಡಿಯಲ್ಲಿ ವಾಹನ ಸಂಚಾರ ನಿರ್ಬಂಧವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಶಿರಾಡಿ ಘಾಟಿಯಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಜೂ. 30 ರೊಳಗೆ ಪೂರ್ಣಗೊಳಿಸಲು ನಿರ್ಧರಿಸಿದ್ದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಕನಿಷ್ಠ ಒಂದು ತಿಂಗಳು ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲು ಪ್ರಸ್ತಾವನೆ ಸಲ್ಲಿಸಿದೆ. ಇದಕ್ಕೆ ಸ್ಪಂದಿಸಿರುವ ಹಾಸನ ಜಿಲ್ಲಾಡಳಿತ ಮಾ. 15ರಿಂದ ಎಪ್ರಿಲ್ ಅಂತ್ಯದವರೆಗೆ ಶಿರಾಡಿಯಲ್ಲಿ ವಾಹನ ಸಂಚಾರ ನಿರ್ಬಂಧಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಸಂಸದ ಶ್ರೇಯಸ್ ಪಟೇಲ್ ಗುರುವಾರ ಕಾಮಗಾರಿ ಪರಿಶೀಲಿಸಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಡಚಣೆಯಾಗದಂತೆ ಶಿರಾಡಿ ಘಾಟಿಯಲ್ಲಿ ಕನಿಷ್ಠ ಒಂದು ತಿಂಗಳು ವಾಹನ ಸಂಚಾರವನ್ನು ನಿರ್ಬಂಧಿಸುವಂತೆ ಜಿಲ್ಲಾಡಳಿತವನ್ನು ಕೋರಲಾಗಿದೆ. ಚತುಷ್ಪಥ ಕಾಂಕ್ರೀಟ್ ರಸ್ತೆ ನಿರ್ಮಿಸುತ್ತಿರುವುದರಿಂದ ಒಂದು ಪಥಕ್ಕೆ ಕಾಂಕ್ರೀಟ್ ಹಾಕಿದಾಗ ಅದರ ಕ್ಯೂರಿಂಗ್‌ಗೆ 25 ದಿನಗಳು ಬೇಕು. ಹಾಗಾಗಿ ಈ ವೇಳೆ ವಾಹನ ಸಂಚಾರ ನಿಷೇಧ ಮಾಡಬೇಕಾಗುತ್ತದೆ ಎಂದು ಸಕಲೇಶಪುರ ಉಪ ವಿಭಾಗಾಧಿಕಾರಿ ಶ್ರುತಿ ಸಂಸದರಿಗೆ ಮನವರಿಕೆ ಮಾಡಿಕೊಟ್ಟರು.

ಶಿರಾಡಿ ಘಾಟಿಯಲ್ಲಿ ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗಗಳನ್ನು ಗುರುತಿಸಲಾಗಿದೆ. ವಾಹನ ಸಂಚಾರ ನಿಷೇಧಿಸುವ ದಿನಾಂಕ ನಿಗದಿ ಪಡಿಸಲಾಗುವುದು ಎಂದರು.

- Advertisement -

Latest News

error: Content is protected !!