Saturday, June 6, 2026
Homeಅಪರಾಧಆಟೋ ರಿಕ್ಷಾದಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ; ಆಟೋ ಚಾಲಕ ಬಂಧನ

ಆಟೋ ರಿಕ್ಷಾದಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ; ಆಟೋ ಚಾಲಕ ಬಂಧನ

- Advertisement -
- Advertisement -

ಮಂಗಳೂರು: ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ನಿಷೇಧಿತ ಮಾದಕ ವಸ್ತುವಾದ ಎಂಡಿಎಂ ಅನ್ನು ಪಾರ್ಸೆಲ್ ಮೂಲಕ ತಂದು ಆಟೋ ರಿಕ್ಷಾದಲ್ಲಿ ನಿಷೇಧಿತ ಮಾದಕ ವಸ್ತುವನ್ನು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಾಗಾಟ ಹಾಗೂ ಮಾರಾಟ ಮಾಡುತ್ತಿದ್ದ ರಿಕ್ಷಾ ಚಾಲಕನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆಟೋ ಚಾಲಕನನ್ನು ಮಂಗಳೂರಿನ ಕಸಬಾ ಬೆಂಗರೆ ನಿವಾಸಿ ಮೊಹಮ್ಮದ್ ಅಬ್ದುಲ್ ಜಲೀಲ್(32) ಎನ್ನಲಾಗಿದೆ.

ಸಿಸಿಬಿ ಪೊಲೀಸರು ಬಂಧಿತನಿಂದ 3,75,000/- ರೂ ಮೌಲ್ಯದ 75 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಹಿತ ಆತನ ಬಳಿಯಲ್ಲಿದ್ದ ಮೊಬೈಲ್, ಬಜಾಜ್ ಆಟೋ ರಿಕ್ಷಾವನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 5 ಲಕ್ಷ ಎನ್ನಲಾಗಿದೆ.

ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ರವರ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕರಾದ ರಫೀಕ್ ಕೆ ಎಂ ರವರ ನೇತೃತ್ವದಲ್ಲಿ ಪಿಎಸ್ಐ ಸುದೀಪ್ ಎಂ ವಿ, ಎಎಸ್ಐ ರಾಮ ಪೂಜಾರಿ  ಹಾಗೂ ಸಿಸಿಬಿ ಸಿಬ್ಬಂದಿಯವರು ಕೈಗೊಂಡಿದ್ದರು.

ಈ ಕುರಿತಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!