Thursday, June 4, 2026
Homeಕರಾವಳಿಉಡುಪಿಕಾರ್ಕಳ : ಪ್ರೇಯಸಿಯ ಪತಿಯನ್ನು ಕೊಂದ ಪ್ರಕರಣ : ಆರೋಪಿ ದಿಲೀಪ್ ಹೆಗ್ಡೆಗೆ ಜಾಮೀನು ನಿರಾಕರಿಸಿದ...

ಕಾರ್ಕಳ : ಪ್ರೇಯಸಿಯ ಪತಿಯನ್ನು ಕೊಂದ ಪ್ರಕರಣ : ಆರೋಪಿ ದಿಲೀಪ್ ಹೆಗ್ಡೆಗೆ ಜಾಮೀನು ನಿರಾಕರಿಸಿದ ಕೋರ್ಟ್

- Advertisement -
- Advertisement -

ಕಾರ್ಕಳ : ಪ್ರೇಯಸಿಯ ಪತಿಯನ್ನು ಕೊಂದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ದಿಲೀಪ್ ಹೆಗ್ಡೆಗೆ ಕಾರ್ಕಳದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸಂಚಾರಿ ಪೀಠ ಜಾಮೀನು ನಿರಾಕರಿಸಿದೆ.

ನ್ಯಾಯಾಂಗ ಬಂಧನದಲ್ಲಿರುವ ದಿಲೀಪ್ ಹೆಗ್ಡೆ ಸಲ್ಲಿಸಿದ್ದ ಜಾಮೀನು ಅರ್ಜಿಗೆ ಸರಕಾರಿ ಅಭಿಯೋಜಕ ಪ್ರಕಾಶ್ಚಂದ್ರ ಶೆಟ್ಟಿ ಆಕ್ಷೇಪ ವ್ಯಕ್ತಪಡಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ಸಮಿವುಲ್ಲಾ ಅವರು ಆರೋಪಿಯ ವಿರುದ್ಧದ ಚಾರ್ಜ್‌ಶೀಟ್‌ನಲ್ಲಿರುವ ಗಂಭೀರ ಅಂಶಗಳನ್ನು ಪರಿಗಣಿಸಿ ಜಾಮೀನು ಅರ್ಜಿ ವಜಾಗೊಳಿಸಿದ್ದಾರೆ‌.

ಈ ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ಪ್ರತಿಮಾ ಸಲ್ಲಿಸಿರುವ ಜಾಮೀನು ಅರ್ಜಿಗೆ ಸರಕಾರಿ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಲು ಮಾ. 10ಕ್ಕೆ ದಿನಾಂಕ ನಿಗದಿಪಡಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದರು.

ಪ್ರಕರಣದ ವಿವರ : 2024ರ ಅ. 20ರಂದು ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆ ಎಂಬಲ್ಲಿ ಬಾಲಕೃಷ್ಣ ಪೂಜಾರಿ (44) ಅವರನ್ನು ಅವರ ಪತ್ನಿ ಪ್ರತಿಮಾ ಮತ್ತು ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಸೇರಿ ಕೊಲೆ ಮಾಡಿದ್ದರು . ಈ ಕೃತ್ಯಕ್ಕೆ‌‌ ಸಂಬಂಧಿಸಿ ಆರೋಪಿಗಳನ್ನು ಅ. 25ರಂದು ಅಜೆಕಾರು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದರು.

- Advertisement -

Latest News

error: Content is protected !!