Friday, June 5, 2026
Homeತಾಜಾ ಸುದ್ದಿರಾಜ್ಯದ ವಿಧಾನಸಭಾ ಕ್ಷೇತ್ರಗಳ ರಸ್ತೆ ಮತ್ತು ಮೂಲಸೌಕರ್ಯದ ಅಭಿವೃದ್ಧಿಗೆ 8,000 ಕೋಟಿ

ರಾಜ್ಯದ ವಿಧಾನಸಭಾ ಕ್ಷೇತ್ರಗಳ ರಸ್ತೆ ಮತ್ತು ಮೂಲಸೌಕರ್ಯದ ಅಭಿವೃದ್ಧಿಗೆ 8,000 ಕೋಟಿ

- Advertisement -
- Advertisement -

ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್‌ ಅನ್ನು ಮಾರ್ಚ್ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ್ದು, ರಾಜ್ಯದ ಪ್ರತಿಯೊಂದು ವಿಧಾನಸಭಾ ಕ್ಷೇತ್ರಗಳ ರಸ್ತೆ ಮತ್ತು ಮೂಲಸೌಕರ್ಯದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ತಮ್ಮ ಬಜೆಟ್‌ ಭಾಷಣದಲ್ಲಿ ತಿಳಿಸಿದರು.

ಈ ನಿಟ್ಟಿನಲ್ಲಿ ರಸ್ತೆ, ಸಣ್ಣ ನೀರಾವರಿ, ಹಾಗೂ ಮೂಲಸೌಕರ್ಯ ಒದಗಿಸಲು 8,000 ಕೋಟಿ ರೂ. ನೀಡಲಾಗಿದ್ದು, ಈ ನಿಟ್ಟಿನಲ್ಲಿ ವಿವಿಧ ತೆರಿಗೆ ಸಂಗ್ರಹಣಾ ಇಲಾಖೆಗಳಾದ ವಾಣಿಜ್ಯ ತೆರಿಗೆ, ಅಬಕಾರಿ, ನೋಂದಣಿ ಮತ್ತು ಮುದ್ರಾಂಕ, ಸಾರಿಗೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗಳ ʻಬಿʼ ಮತ್ತು ʻಸಿʼ ವೃಂದಗಳಲ್ಲಿ ಕೌನ್ಸೆಲಿಂಗ್‌ ಮೂಲಕ ವರ್ಗಾವಣೆ ಪ್ರಕ್ರಿಯೆ ಜಾರಿಗೊಳಿಸಲಾಗುವುದು. ವಿವಿಧ ನಿಯಮಗಳ ಸರಳೀಕರಣದ ಮೂಲಕ ಆಡಳಿತದಲ್ಲಿ ದಕ್ಷತೆಯನ್ನು ಹೆಚ್ಚಿಸಲಾಗುವುದು ಎಂದು ಬಜೆಟ್‌ ನಲ್ಲಿ ತಿಳಿಸಿದ್ದಾರೆ

.

- Advertisement -

Latest News

error: Content is protected !!