Friday, June 5, 2026
Homeತಾಜಾ ಸುದ್ದಿಗೃಹಲಕ್ಷ್ಮಿ ಯೋಜನೆಗೆ ₹28,608 ಕೋಟಿ ಮೀಸಲು; 2025ರ ಬಜೆಟ್ ಮುಖ್ಯಾಂಶಗಳು ಇಲ್ಲಿದೆ ನೋಡಿ..

ಗೃಹಲಕ್ಷ್ಮಿ ಯೋಜನೆಗೆ ₹28,608 ಕೋಟಿ ಮೀಸಲು; 2025ರ ಬಜೆಟ್ ಮುಖ್ಯಾಂಶಗಳು ಇಲ್ಲಿದೆ ನೋಡಿ..

- Advertisement -
- Advertisement -

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ, ಹಣಕಾಸು ಸಚಿವರಾಗಿರುವ ಸಿದ್ಧರಾಮಯ್ಯ ಅವರು 2025-26ನೇ ಸಾಲಿನ ಬಜೆಟ್‌ ಅನ್ನು ಮಾರ್ಚ್ 7 ರಂದು ಮಂಡಿಸಿದ್ದು, ಬಜೆಟ್ ಗಾತ್ರ 4,09,549 ಲಕ್ಷ ಕೋಟಿ ರೂ.ಗಳು. ವಿವಿಧ ವಲಯಗಳಿಗೆ ಬಂಪರ್ ಕೊಡುಗೆಗಳನ್ನು ಬಜೆಟ್‌ನಲ್ಲಿ ನೀಡಿದ್ದಾರೆ.

ರಾಜ್ಯದ ರಸ್ತೆ ಮತ್ತು ಮೂಲಸೌಕರ್ಯದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮಕ್ಕಾಗಿ 8,000 ಕೋಟಿ, ಗ್ಯಾರಂಟಿ ಯೋಜನೆಗಳಿಗಾಗಿ ₹ 51,034 ಕೋಟಿ ರೂ. ಮೀಸಲು, ಬೆಂಗಳೂರು ಮಹಾನಗರದ ಮೂಲಸೌಕರ್ಯ, ಸೇವಾಪೂರೈಕೆ ಹಾಗೂ ಸಂಚಾರ ಸುವ್ಯವಸ್ಥೆಗಳಿಗಾಗಿ ʻಬ್ರ್ಯಾಂಡ್‌ ಬೆಂಗಳೂರುʼ ಎಂಬ ಪರಿಕಲ್ಪನೆಯಡಿ ಮಹತ್ವಾಕಾಂಕ್ಷಿ ಯೋಜನೆಗಳ ಜಾರಿಗೊಳಿಸಲಾಗಿದೆ.

ಅತಿಹೆಚ್ಚು ಉದ್ಯೋಗ ಸೃಜನೆಯಾಗುವ ಎಂ.ಎಸ್.ಎಂ.ಇ, ಪ್ರವಾಸೋದ್ಯಮ, ಐಟಿಬಿಟಿ ವಲಯಗಳಲ್ಲಿ ಹೊಸ ನೀತಿ ಜಾರಿ, ಅತಿಹೆಚ್ಚು ಉದ್ಯೋಗ ಸೃಜನೆಯಾಗುವ ಎಂ.ಎಸ್.ಎಂ.ಇ, ಪ್ರವಾಸೋದ್ಯಮ, ಐಟಿಬಿಟಿ ವಲಯಗಳಲ್ಲಿ ಹೊಸ ನೀತಿ ಜಾರಿ, ಪ್ರಾದೇಶಿಕ ಅಸಮಾನತೆಯ ನಿವಾರಣೆ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಬಲವರ್ಧನೆ, ಸಾರಿಗೆಯ ಸುಗಮ ವ್ಯವಸ್ಥೆ, ಕಾನೂನು ಮತ್ತು ಸುವ್ಯವಸ್ಥೆ ನಿಭಾವಣೆಗೆ ಹೊಸ ಕಾರ್ಯತಂತ್ರಗಳಿಗೆ ಹೆಚ್ಚು ಆದ್ಯತೆ ನೀಡಲಾಗಿದೆ.

ರೈತರ ಕಲ್ಯಾಣ ಉದ್ದೇಶಿತ ಯೋಜನೆಗಳಿಗೆ ವಿವಿಧ ಇಲಾಖೆಗಳಿಗೆ ಕಳೆದ ಒಟ್ಟು $51,339 ಕೋಟಿ ಅನುದಾನ, 2030 ರ ವೇಳೆಗೆ ಉತ್ಪಾದನಾ ವಲಯದಲ್ಲಿ ಶೇ.12ರಷ್ಟು ವಾರ್ಷಿಕ ಬೆಳವಣಿಗೆಯನ್ನು ಸಾಧಿಸುವುದರೊಂದಿಗೆ 20 ಲಕ್ಷ ಉದ್ಯೋಗಗಳನ್ನು ಸೃಜಿಸುವ ಗುರಿ, ರಾಜ್ಯಕ್ಕೆ ಹೆಚ್ಚಿನ ಹೂಡಿಕೆಗಳನ್ನು ಆಕರ್ಷಿಸುವ ಉದ್ದೇಶದಿಂದ ಒಟ್ಟು ₹13,692 ಕೋಟಿ ಆರ್ಥಿಕ ನೆರವು ಮತ್ತು ಸಹಾಯಧನ, ಹೂಡಿಕೆಗಳನ್ನು ಉತ್ತೇಜನಕ್ಕೆ₹ 13,500 ಕೋಟಿ ಸಹಾಯಧನ ಮತ್ತು ಆರ್ಥಿಕ ನೆರವು, 2024-25ನೇ ಸಾಲಿಗೆ ರಾಜಸ್ವ ಸ್ವೀಕೃತಿಗಳು ವಾರ್ಷಿಕ ಶೇ 10.3 ರಷ್ಟು ಬೆಳವಣಿಗೆಯನ್ನು ದಾಖಲಿಸುವ ನಿರೀಕ್ಷೆಯನ್ನು ಮಾಡಲಾಗಿದೆ.

ತೆರಿಗೆಯೇತರ ರಾಜಸ್ವವು ವರ್ಷವಾರು ಶೇ10.5ರಷ್ಟು ಬೆಳವಣಿಗೆ ಸಾಧಿಸುವ ನಿರೀಕ್ಷೆ, ವಾಣಿಜ್ಯ ತೆರಿಗೆ, ಅಬಕಾರಿ, ನೋಂದಣಿ ಮತ್ತು ಮುದ್ರಾಂಕ, ಸಾರಿಗೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗಳ ʻಬಿʼ ಮತ್ತು ʻಸಿʼ ವೃಂದಗಳಲ್ಲಿ ಕೌನ್ಸೆಲಿಂಗ್‌ ಮೂಲಕ ವರ್ಗಾವಣೆ ಪ್ರಕ್ರಿಯೆಯನ್ನು ನೀಡಲಾಗಿದೆ.

ಕೃಷಿ ಕ್ಷೇತ್ರದಲ್ಲಿ ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ ಸಹಾಯಧನ ಒದಗಿಸಲು ₹428 ಕೋಟಿ ಅನುದಾನ, 1.81 ಲಕ್ಷ ರೈತರಿಗೆ ಹನಿ ಮತ್ತು ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ ₹440 ಕೋಟಿ ಸಹಾಯಧನ, ರೈತರ ಆದಾಯ ಮತ್ತು ಪೌಷ್ಟಿಕ ಭದ್ರತೆಯನ್ನು ಸುಧಾರಿಸಲು ₹ 88 ಕೋಟಿ, 5,000 ಕಿರು ಸಂಸ್ಕರಣಾ ಘಟಕಗಳನ್ನು ಸ್ಥಾಪನೆ, 12,000 ಕೃಷಿ ಹೊಂಡಗಳ ಸ್ಥಾಪನೆ, ಹವಾಮಾನ ವಲಯಗಳನ್ನು ಮರುವ್ಯಾಖ್ಯಾನಗೊಳಿಸಲು ತಜ್ಞರ ಸಮಿತಿ ರಚನೆ, ರೈತರ ಜೀವನೋಪಾಯವನ್ನು ಸುಧಾರಿಸಲು ʻಸಮಗ್ರ ಮಳೆಯಾಶ್ರಿತ ಕೃಷಿ ನೀತಿʼಯನ್ನು ಅನುಷ್ಠಾನ, ಸುಸ್ಥಿರ ಸಾವಯವ ಕೃಷಿಯನ್ನು ಉತ್ತೇಜಿಸಲು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕನ್ನು ರಾಜ್ಯದ ಪ್ರಥಮ ಸಾವಯವ ತಾಲ್ಲೂಕನ್ನಾಗಿ ಪರಿವರ್ತನೆ ಮಾಡಲಾಗುವುದು.

ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಒಟ್ಟಾರೆ 3,000 ಹೆಕ್ಟೇರ್ ಪ್ರದೇಶದಲ್ಲಿ ಸಮಗ್ರ ಮಣ್ಣು ಮತ್ತು ನೀರಿನ ನಿರ್ವಹಣೆ, ಸಮರ್ಪಕ ತ್ಯಾಜ್ಯ ನಿರ್ವಹಣೆ, ನೀರಿನ ಬಳಕೆ ಮತ್ತು ಸಮತೋಲನ ಪೋಷಕಾಂಶ ನಿರ್ವಹಣೆಯನ್ನು ಸಕ್ಕರೆ ಕಾರ್ಖಾನೆಗಳ ಸಹಯೋಗದೊಂದಿಗೆ ಜಾರಿ, ಮಂಡ್ಯ ಕೃಷಿ ವಿಶ್ವವಿದ್ಯಾಲಯಕ್ಕೆ ₹25 ಕೋಟಿ, ₹ 20 ಕೋಟಿ ಮೊತ್ತದಲ್ಲಿ ʻಸಾವಯವ ಮತ್ತು ಸಿರಿಧಾನ್ಯಗಳ ಹಬ್‌ʼ ಅನ್ನು ಸ್ಥಾಪನೆ, ವಿಜಯಪುರದ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪನೆತೋಟಗಾರಿಕೆ, ತೋಟಗಾರಿಕಾ ಅಭಿವೃದ್ಧಿ ಯೋಜನೆ-2 ಗೆ ₹95 ಕೋಟಿ ಅನುದಾನ, ತೋಟಗಾರಿಕಾ ಬೆಳೆಗಳ ಹನಿ ನೀರಾವರಿ ಕಾರ್ಯಕ್ರಮದಡಿ ಸುಮಾರು 52,000 ಫಲಾನುಭವಿಗಳಿಗೆ ₹426 ಕೋಟಿ. ಸಹಾಯ ಧನ ನೀಡಲಾಗುತ್ತದೆ.

ಅಡಿಕೆಯ ಎಲೆ ಚುಕ್ಕೆ ರೋಗದ ಬಾಧೆ ನಿಯಂತ್ರಣ ಕ್ರಮಗಳಿಗೆ ₹62 ಕೋಟಿ, ಮೈಸೂರಿನಲ್ಲಿ NABARD ಸಹಯೋಗದಲ್ಲಿ ರೇಷ್ಮೆಗೂಡಿನ ಮಾರುಕಟ್ಟೆ ಸ್ಥಾಪನೆ, ರೇಷ್ಮೆ ಅಭಿವೃದ್ಧಿ ಯೋಜನೆಯಡಿಯಲ್ಲಿ ಪ್ರಸಕ್ತ ಸಾಲಿನಲ್ಲಿ ₹55 ಕೋಟಿ ರೂ. ಅನುದಾನ.

ಪ್ರಾಥಮಿಕ ಶಿಕ್ಷಣ ಏಷಿಯನ್‌ ಡೆವಲಪ್‌ಮೆಂಟ್‌ ಬ್ಯಾಂಕ್‌ ನೆರವಿನೊಂದಿಗೆ ₹2,500 ಕೋಟಿ ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ಪ್ರಾರಂಭ, ಶಾಲಾ ಮಕ್ಕಳಿಗೆ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್‌ ವತಿಯಿಂದ ಪ್ರಸ್ತುತ ವಾರದಲ್ಲಿ ಮೂರು ದಿನ ಸಾಯಿ ಶ್ಯೂರ್‌ ರಾಗಿ ಹೆಲ್ತ್‌ ಮಿಕ್ಸ್‌ ಪುಡಿಯನ್ನು ಬಿಸಿ ಹಾಲಿನೊಂದಿಗೆ ಮಿಶ್ರಣ ಮಾಡಿ ವಿತರಿಸಲಾಗುತ್ತಿದ್ದು, ಇದನ್ನು ವಾರದ ಐದು ದಿನಗಳಿಗೆ ವಿಸ್ತರಿಸಲಾಗುವುದು. ₹ 100 ಕೋಟಿ ವೆಚ್ಚದ ಈ ಯೋಜನೆಯ ಶೇ 25 ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ.

ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕ ಮಾಸಿಕ ಗೌರವಧನವನ್ನು ₹ 2,000 ಹೆಚ್ಚಳ, ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನ ₹ 1,000ಗೆ, ರಾಜ್ಯದ ಅರ್ಹ 100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಣ, 5000 ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳ ವಿಸ್ತರಣೆ ಇದಕ್ಕಾಗಿ ₹70 ಕೋಟಿ ವೆಚ್ಚ.

ʻಕಲಿಕಾ ಚಿಲುಮೆʼ ಕಾರ್ಯಕ್ರಮದಡಿ ಒಂದರಿಂದ ಐದನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಸಂತಸದಾಯಕ ಕಲಿಕಾ ಅನುಭವ ಒದಗಿಸುವುದು, ʻಗಣಿತ ಗಣಕʼ ಕಾರ್ಯಕ್ರಮದಡಿ 3 ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಫೋನ್‌ ಮೂಲಕ ವೈಯಕ್ತಿಕ ಬೋಧನೆಯೊಂದಿಗೆ ಬುನಾದಿ ಗಣಿತ ಕೌಶಲ್ಯವನ್ನು ಅಭಿವೃದ್ಧಿಪಡಿಸಿ ರಾಜ್ಯಾದ್ಯಂತ ವಿಸ್ತರಣೆ, ʻಓದು ಕರ್ನಾಟಕʼ ಯೋಜನೆಯಡಿ 4 ಮತ್ತು 5ನೇ ತರಗತಿ ವಿದ್ಯಾರ್ಥಿಗಳಿಗೆ ಬುನಾದಿ ಸಾಕ್ಷರತೆ ಹಾಗೂ ಸಂಖ್ಯಾಜ್ಞಾನದ ಕೌಶಲ್ಯಗಳನ್ನು ಅಭಿವೃದ್ಧಿ, ಸರ್ಕಾರಿ ಶಾಲೆಗಳಲ್ಲಿ ಅತೀ ಕಡಿಮೆ ಕಲಿಕಾ ಸ್ತರದಲ್ಲಿರುವ 6 ರಿಂದ 10ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಹೆಚ್ಚಿಸುವ ʻಮರುಸಿಂಚನʼ ಕಾರ್ಯಕ್ರಮವನ್ನು ರಾಜ್ಯಾದ್ಯಂತ ವಿಸ್ತರಿಸುವುದು.

ʻನಿರಂತರʼ ಕಾರ್ಯಕ್ರಮದಡಿ Face Recognition ತಂತ್ರಜ್ಞಾನದ ಮೂಲಕ ಮಕ್ಕಳ ಹಾಜರಾತಿಯನ್ನು ಖಚಿತಪಡಿಸುವ ವ್ಯವಸ್ಥೆಯನ್ನು ಜಾರಿ, ವಿದ್ಯಾರ್ಥಿಗಳಲ್ಲಿ ಮಾತೃಭಾಷೆಯ ಜೊತೆಗೆ ಆಂಗ್ಲಭಾಷೆಯ ಕೌಶಲ್ಯ ಬೆಳೆಸಲು ರಾಜ್ಯದ 4,000 ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ವಿಭಾಗವನ್ನು ಪ್ರಾರಂಭಿಸಲಾಗುವುದು, 114. ರಾಜ್ಯದ 500 ಸರ್ಕಾರಿ ಪ್ರೌಢಶಾಲೆಗಳಲ್ಲಿ ಕಂಪ್ಯೂಟರ್‌ ಮತ್ತು ವಿಜ್ಞಾನ ಪ್ರಯೋಗಾಲಯಗಳ ಸ್ಥಾಪನೆ, ಸರ್ಕಾರಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿ, ಶೌಚಾಲಯಗಳ ನಿರ್ಮಾಣ ಮತ್ತು ದುರಸ್ತಿ ಕಾರ್ಯಗಳಿಗೆ ₹725 ಕೋಟಿ. ಹಾಗೂ ಅಗತ್ಯ ಪೀಠೋಪಕರಣಗಳನ್ನು ಒದಗಿಸಲು ₹50 ಕೋಟಿ.

ಮಹಿಳಾ ಮತ್ತು ಕಲ್ಯಾಣ ಇಲಾಖೆಗೆ ಗೃಹಲಕ್ಷ್ಮಿ ಯೋಜನೆ ₹28,608 ಕೋಟಿ, ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ₹1,000 ಹಾಗೂ ಸಹಾಯಕಿಯರ ಗೌರವಧನವನ್ನು₹750ಗೆ ಹೆಚ್ಚಳ, ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗಾಗಿ ₹ 94,084 ಕೋಟಿ, ಮಕ್ಕಳ ಉದ್ದೇಶಿತ ಕಾರ್ಯಕ್ರಮಗಳಿಗಾಗಿ ₹62,033 ಕೋಟಿ, ರಾಜ್ಯ ಅನುದಾನದಡಿಯಲ್ಲಿ ನಡೆಯುತ್ತಿರುವ ವಸತಿಯುತ ವಿಶೇಷ ಶಾಲೆಗಳ ಮಕ್ಕಳ ಪಥ್ಯಾಹಾರ ಭತ್ಯೆಯನ್ನು ಮಾಸಿಕ ₹1,750ಗೆ ಹೆಚ್ಚಳ

HIV ಸೋಂಕಿತ ಮತ್ತು ಬಾಧಿತರಿಗೆ ನೀಡಲಾಗುತ್ತಿರುವ ಮಾಸಿಕ ಧನಸಹಾಯ ₹1,000ನಿಂದ ₹2,000ಗೆ ಹೆಚ್ಚಳ, ಸಕ್ಷಮ ಅಂಗನವಾಡಿ ಯೋಜನೆಯಡಿ ರಾಜ್ಯದ 17,454 ಅಂಗನವಾಡಿ ಕೇಂದ್ರಗಳಿಗೆ ಹೆಚ್ಚುವರಿ ಸೌಲಭ್ಯಗಳನ್ನು ಕಲ್ಪಿಸಲು ತಲಾ ₹1 ಲಕ್ಷದಂತೆ ಒಟ್ಟು ₹175 ಕೋಟಿ ಅನುದಾನ, ಬಳ್ಳಾರಿಯ ಸರ್ಕಾರಿ ಶ್ರವಣದೋಷವುಳ್ಳ ಮಕ್ಕಳ ಶಾಲೆ ಹಾಗೂ ಹುಬ್ಬಳ್ಳಿಯ ದೃಷ್ಟಿದೋಷವುಳ್ಳ ಮಕ್ಕಳ ಶಾಲೆಗಳನ್ನು ಪ್ರಾಥಮಿಕ ಶಾಲಾ ಹಂತದಿಂದ ಪ್ರೌಢಶಾಲಾ ಹಂತಕ್ಕೆ ಮೇಲ್ದರ್ಜೆಗೆ ವರ್ಗ ಮಾಡಲಾಗಿದೆ.

- Advertisement -

Latest News

error: Content is protected !!