Wednesday, June 3, 2026
Homeತಾಜಾ ಸುದ್ದಿಮೂತ್ರ ವಿಸರ್ಜನೆಗೆ ಕಾರಿನಿಂದ ಇಳಿದಾಗ ಸ್ಕೂಟರ್ ಡಿಕ್ಕಿ; ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿಗೆ ಗಂಭೀರ ಗಾಯ

ಮೂತ್ರ ವಿಸರ್ಜನೆಗೆ ಕಾರಿನಿಂದ ಇಳಿದಾಗ ಸ್ಕೂಟರ್ ಡಿಕ್ಕಿ; ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿಗೆ ಗಂಭೀರ ಗಾಯ

- Advertisement -
- Advertisement -

ಚಿತ್ರದುರ್ಗ: ಮೂತ್ರ ವಿಸರ್ಜನೆಗೆ ಕಾರಿನಿಂದ ಇಳಿದಾಗ ಸ್ಕೂಟರ್ ಡಿಕ್ಕಿಯಾಗಿ ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿ ಬಳಿ ಘಟನೆ ನಡೆದಿದೆ. ಅವರನ್ನು ದಾವಣಗೆರೆಯ ಎನ್ ಎಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನಿಂದ ಕುಮಾರ ಪಟ್ಟಣ ಸಮೀಪದ ಸ್ವಗ್ರಾಮಕ್ಕೆ ತೆರಳುತ್ತಿದ್ದಂತೆ ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಮಾರ್ಗ ಮಧ್ಯೆ ಮೂತ್ರ ವಿಸರ್ಜನೆಗೆ ಕಾರಿನಿಂದ ಇಳಿಯುತ್ತಿದ್ದರು. ಈ ವೇಳೆಯಲ್ಲಿ ಹಿಂಬದಿಯಿಂದ ಸ್ಕೂಟರ್ ಒಂದು ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ತಲೆ, ಕೈ-ಕಾಲುಗಳಿಗೆ ಪೆಟ್ಟು ಬಿದ್ದಿರುವುದಾಗಿ ತಿಳಿದು ಬಂದಿದೆ.

ಬೈಕ್ ಗುದ್ದಿದ ಕಾರಣ ಗಾಯಗೊಂಡ ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅವರನ್ನು ಹಿರಿಯೂರು ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ ಎಸ್ ಎಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಇದೀಗ ರುದ್ರಪ್ಪ ಲಮಾಣಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

- Advertisement -

Latest News

error: Content is protected !!