Saturday, June 13, 2026
Homeಕರಾವಳಿಮಂಗಳೂರುಮಂಗಳೂರು; ಕೊಂಬೆ ಮುರಿದು ಬಿದ್ದು ಮೂವರು ವಿದ್ಯಾರ್ಥಿನಿಯರಿಗೆ ಗಾಯ

ಮಂಗಳೂರು; ಕೊಂಬೆ ಮುರಿದು ಬಿದ್ದು ಮೂವರು ವಿದ್ಯಾರ್ಥಿನಿಯರಿಗೆ ಗಾಯ

- Advertisement -
- Advertisement -

ಮಂಗಳೂರು; ಕೊಂಬೆ ಮುರಿದು ಬಿದ್ದು ಮೂವರು ವಿದ್ಯಾರ್ಥಿನಿಯರಿಗೆ ಗಾಯಗಳಾಗಿರುವ ಘಟನೆ ಮಂಗಳೂರಿನ ನಗರದ ಹಂಪನಕಟ್ಟೆ ಜಂಕ್ಷನ್‌ ಬಳಿಯ ಶೆಟ್ಟಿ ಆಟೋ ಪಾರ್ಕ್‌ ಬಳಿ ಮಾ.17 ರ ಸಂಜೆ ನಡೆದಿದೆ.

ಮಲ್ಲೂರು ಉದ್ದಬೆಟ್ಟು ನಿವಾಸಿಗಳಾದ ಮರಿಯಂ ಮುಫೀದಾ (18), ಫಾಹಿಮಾ ಮರಿಯಂ (17) ಹಾಗೂ ಅಬ್ಬೆಟ್ಟು ನಿವಾಸಿ ಅಫ್ರತ್‌ (18) ಗಾಯಗೊಂಡಿದ್ದಾರೆ.  ನಿನ್ನೆ ಸಂಜೆ 4.30 ಕ್ಕೆ ಕಾಲೇಜು ಮುಗಿಸಿ ಮನೆಗೆ ತೆರಳಲು ಹಂಪನಕಟ್ಟೆಯ ಬಳಿ ಬಸ್ಸಿಗೆ ಕಾಯುತ್ತಿದ್ದಾಗ ಮರದ ಕೊಂಬೆ ಬಿದ್ದಿದೆ.ಜನ ನಿಬಿಡ ಪ್ರದೇಶ ಇದಾಗಿದ್ದು ಭಾರೀ ಅನಾಹುತ ಸ್ಪಲ್ಪದರದಲ್ಲೇ ತಪ್ಪಿದೆ.

ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆಯಲ್ಲಿ ಇನ್ನೂ ಕೆಲವರಿಗೆ ಗಾಯವಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಆಗಮಿಸಿದ್ದು, ಮರದ ಕೊಂಬೆಗಳನ್ನು ತೆರವುಗೊಳಿಸಿದೆ.

- Advertisement -

Latest News

error: Content is protected !!