Saturday, June 13, 2026
Homeಕರಾವಳಿಮಂಗಳೂರುಬಂಟ್ವಾಳ; ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವ ವಕೀಲ ಸಾ*ವು

ಬಂಟ್ವಾಳ; ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವ ವಕೀಲ ಸಾ*ವು

- Advertisement -
- Advertisement -

ಬಂಟ್ವಾಳ; ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವ ವಕೀಲ ಚಿಕಿತ್ಸೆ ಫಲಿಸದೇ ಸಾ*ವನ್ನ್ಪಪಿರುವ ಘಟನೆ ಬಿ ಸಿ ರೋಡಿನಲ್ಲಿ ನಡೆದಿದೆ. ಪ್ರಥಮ್ ಬಂಗೇರ (27) ಮೃತ ವಕೀಲ.

ಪ್ರಥಮ್ ಗೆ ಕಳೆದ ವಾರ ಬಿ.ಸಿ.ರೋಡ್ ಮುಖ್ಯ ವೃತ್ತದ ಬಳಿ ಅಪಘಾತವಾಗಿತ್ತು. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ. ಇನ್ನು ಮೃತರ ಎರಡು ಕಣ್ಣು, ಎರಡು ಕಿಡ್ನಿ, ಲಿವರ್ ಮತ್ತು ಕರುಳಿನ ಭಾಗವನ್ನು ದಾನವಾಗಿ ನೀಡಿ ಮೃತರ ತಂದೆ ಮತ್ತು ಸಹೋದರ ಮಾನವೀಯತೆಯನ್ನು ಮೆರೆದಿದ್ದಾರೆ.

ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಎಲ್‌ಎಲ್‌ಬಿ ಶಿಕ್ಷಣ ಪಡೆದು ಬಿ.ಸಿ.ರೋಡಿನ ಕೆ.ವೆಂಕಟ್ರಮಣ ಶೆಣೈಯವರ ಬಳಿ ವಕೀಲವೃತ್ತಿಯನ್ನು ಅಭ್ಯಾಸ ಮಾಡುತ್ತಿದ್ದರು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಚುರುಕಾಗಿದ್ದು, ಒಳ್ಳೆಯ ನೃತ್ಯಪಟುವೂ ಆಗಿದ್ದರು. ಕಳೆದ ನವೆಂಬರ್ ತಿಂಗಳಿನಲ್ಲಿ ಇವರ ತಾಯಿ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಮೃತರಿಗೆ ತಂದೆ ಮತ್ತು ಸಹೋದರ ಇದ್ದರು.

- Advertisement -

Latest News

error: Content is protected !!