Wednesday, June 3, 2026
Homeಅಪರಾಧರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್‌ & ಗ್ಯಾಂಗ್‌ ಜಾಮೀನು ರದ್ದು ಕೋರಿ ಅರ್ಜಿ; ಸುಪ್ರೀಂ ಕೋರ್ಟ್ ನಿಂದ ವಿಚಾರಣೆಗೆ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್‌ & ಗ್ಯಾಂಗ್‌ ಜಾಮೀನು ರದ್ದು ಕೋರಿ ಅರ್ಜಿ; ಸುಪ್ರೀಂ ಕೋರ್ಟ್ ನಿಂದ ವಿಚಾರಣೆಗೆ ದಿನ ನಿಗದಿ

- Advertisement -
- Advertisement -

ಬೆಂಗಳೂರು: ಚಿತ್ರದುರ್ಗದರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧ ಪಟ್ಟ ಪ್ರಮುಖ ಆರೋಪಿಗಳು ಸೇರಿದಂತೆ ಇತರರಿಗೆ ಜಾಮೀನು ಸಿಕ್ಕಿದೆ. ಆದರೆ ಆರೋಪಿಗಳ ಜಾಮೀನು ರದ್ದು ಕೋರಿ ಸಲ್ಲಿಕೆ ಮಾಡಿರುವ ಅರ್ಜಿಯನ್ನು ಏಪ್ರಿಲ್‌ 2 ರಂದು ವಿಚಾರಣೆ ಮಾಡಲಾಗುವುದೆಂದು ತಿಳಿದು ಬಂದಿದೆ.

ಸುಪ್ರೀಂ ಕೋರ್ಟ್ ಅನಿಲ್ ಕುಮಾರ್ ನಿಶಾನಿ ಅವರ ಮನವಿಗೆ ಸ್ಪಂದಿಸಿ ದಿನ ನಿಗದಿ ಪಡಿಸಿದೆ ಎನ್ನಲಾಗಿದೆ. ಇನ್ನು ಈಗಾಗಲೇ ಪ್ರಕರಣದ ಎ2 ಆರೋಪಿಯಾಗಿರುವ ದರ್ಶನ್‌ ಚಿತ್ರೀಕರಣದಲ್ಲಿ ನಿರತರಾಗಿದ್ದು, ದರ್ಶನ್‌ ಪರ ಸುಪ್ರೀಂನಲ್ಲೂ ನಾಗೇಶ್‌ ಅವರೇ ವಾದ ಮಂಡಿಸುವ ಸಾಧ್ಯತೆಯಿದೆ. ಸರ್ಕಾರದ ಪರವಾಗಿ ಅನಿಲ್‌ ಕುಮಾರ್‌ ವಾದ ಮಂಡಿಸಲಿದ್ದಾರೆ ಎನ್ನಲಾಗಿದೆ.

ಎ1 ಆರೋಪಿ ಪವಿತ್ರಾ ಗೌಡ ತಮ್ಮ ರೆಡ್ ಕಾರ್ಪೆಟ್ ಫ್ಯಾಷನ್ ಸ್ಟುಡಿಯೋದಲ್ಲಿ ಕಾರ್ಯಪ್ರವೃತರಾಗಿದ್ದಾರೆ. 

ದರ್ಶನ್ , ಪವಿತ್ರಾಗೌಡ, ನಾಗರಾಜ್, ಲಕ್ಷ್ಮಣ್, ಅನುಕುಮಾರ್, ಜಗದೀಶ್ ಮತ್ತು ಪ್ರದೋಶ್​​​ ಅವರ ಜಾಮೀನು ಅರ್ಜಿಯನ್ನು ಪ್ರಶ್ನಿಸಿ ಪೊಲೀಸರು ಮೇಲ್ಮನವಿ ಸಲ್ಲಿಸಿದ್ದರು. 

ಅರ್ಜಿಯ ವಿಚಾರಣೆಯು ಇನ್ನೂ ನಡೆಯದೇ ಇರುವುದರಿಂದ, ಈ ಸಂಬಂಧ ವಕೀಲ ಅನಿಲ್‌ ಕುಮಾರ್‌ ನಿಶಾನಿ ಅವರು ಅರ್ಜಿಯ ವಿಚಾರಣೆ ನಡೆಸುವಂತೆ ಸುಪ್ರೀಂಗೆ ಮನವಿ ಮಾಡಿದ್ದಾರೆ.

- Advertisement -

Latest News

error: Content is protected !!