Wednesday, June 24, 2026
Homeಕರಾವಳಿಉಡುಪಿಉಡುಪಿ: ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಡಿ ಮಹಿಳೆಗೆ ಹಲ್ಲೆ ಪ್ರಕರಣ; ಎಸ್ಪಿಯಿಂದ ವರದಿ ಕೇಳಿದ...

ಉಡುಪಿ: ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಡಿ ಮಹಿಳೆಗೆ ಹಲ್ಲೆ ಪ್ರಕರಣ; ಎಸ್ಪಿಯಿಂದ ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ

- Advertisement -
- Advertisement -

ಉಡುಪಿ: ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಡಿ ದಲಿತ ಮಹಿಳೆಗೆ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಮಹಿಳಾ ಆಯೋಗ ಎಸ್ಪಿಯಿಂದ ವರದಿ ಕೇಳಿದೆ.

ಪ್ರಕರಣವನ್ನು ನಿಯಮಾನುಸಾರ ಪರಿಶೀಲಿಸಿ, ಇದಕ್ಕೆ ಕಾರಣಕರ್ತರಾದವರ ವಿರುದ್ಧ ಕ್ರಮಕೈಗೊಂಡು, ಕೈಗೊಂಡ ಕ್ರಮದ ಕುರಿತ ವರದಿಯನ್ನು ಆಯೋಗಕ್ಕೆ ಕೂಡಲೇ ಕಳುಹಿಸಿ ಕೊಡುವಂತೆ, ಕರ್ನಾಟಕ ರಾಜ್ಯ ಮಹಿಳಾ ಆಯೋಗ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರಿಗೆ ಸೂಚನೆ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿನ ಪತ್ರಿಕೆಗಳಲ್ಲಿ ಬಂದಿರುವ ವರದಿಗಳನ್ನು ಗಮನಿಸಿದ್ದು, ಮಹಿಳೆಯ ಮೇಲೆ ನಡೆದಿರುವ ಅಮಾನುಷ ಕೃತ್ಯವನ್ನು ರಾಜ್ಯ ಮಹಿಳಾ ಆಯೋಗ ತೀವ್ರವಾಗಿ ಖಂಡಿಸುತ್ತದೆ ಎಂದು ಎಸ್ಪಿಯವರಿಗೆ ಪತ್ರ ಬರೆದಿರುವ ಆಯೋಗದ ಕಾರ್ಯದರ್ಶಿ, ಸಮಗ್ರ ಘಟನೆ ಹಾಗೂ ಅದಕ್ಕೆ ಕೈಗೊಂಡಿರುವ ಕ್ರಮದ ಕುರಿತು ಕೂಡಲೇ ವರದಿಯೊಂದನ್ನು ಆಯೋಗಕ್ಕೆ ಕಳುಹಿಸಿಕೊಡುವಂತೆ ಕೋರಿದ್ದಾರೆ.

- Advertisement -

Latest News

error: Content is protected !!