Friday, June 27, 2025
Homeಕರಾವಳಿಮಂಗಳೂರುಉಪ್ಪಿನಂಗಡಿ; ಪತ್ನಿ ತವರು ಮನೆಗೆ ಹೋಗಿದ್ದಕ್ಕೆ ಬೇಸರಗೊಂಡು ಪತಿ ಆತ್ಮಹತ್ಯೆ

ಉಪ್ಪಿನಂಗಡಿ; ಪತ್ನಿ ತವರು ಮನೆಗೆ ಹೋಗಿದ್ದಕ್ಕೆ ಬೇಸರಗೊಂಡು ಪತಿ ಆತ್ಮಹತ್ಯೆ

spot_img
- Advertisement -
- Advertisement -

ಉಪ್ಪಿನಂಗಡಿ; ಪತ್ನಿ ತವರು ಮನೆಗೆ ಹೋಗಿದ್ದಕ್ಕೆ ಬೇಸರಗೊಂಡು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಪ್ಪಿನಂಗಡಿ ಪೊಲೀಸ್‌ ಠಾಣಾ ವ್ಯಾಪ್ತಿಯ ಕೌಕ್ರಾಡಿ ಗ್ರಾಮದ ಪಡ್ಲಡ್ಕ ಎಂಬಲ್ಲಿ ನಡೆದಿದೆ.ಶೇಷಪ್ಪ (38) ಎಂಬುವವರೇ ನೇಣಿಗೆ ಶರಣಾದವರು.

ಗುರುವಾರ ರಾತ್ರಿ ಮನೆಗೆ ಬಂದಾತ ತಾಯಿಯೊಂದಿಗೆ ಜಗಳವಾಡಿದ್ದು, ತಾಯಿ ತಮ್ಮ ರಕ್ಷಣೆಗೆಂದು ನೆರೆಮನೆಗೆ ಹೋಗಿದ್ದರು. ಈ ವೇಳೆ ಮನೆಯ ಎದುರುಗಡೆಯ ಹಾಲ್‌ನಲ್ಲಿ ಅಡ್ಡಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈತನ ಪತ್ನಿ ತವರು ಮನೆಗೆ ಹೋಗಿರುವ ಬೇಸರದಿಂದ ಜೀವನದಲ್ಲಿ ಜಿಗುಪ್ಸೆಗೊಂಡು  ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಬಗ್ಗೆ  ರಾಮಕ್ಕ ಎಂಬವರು ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!