Saturday, June 6, 2026
Homeಕೊಡಗುಕೊಡಗು; ಕಾರನ್ನು ಓವರ್ ಟೇಕ್ ಮಾಡಲು ಹೋಗಿ ಲಾರಿ ಅಡಿಗೆ ಬಿದ್ದು ಬೈಕ್ ಸವಾರ ಸಾವು

ಕೊಡಗು; ಕಾರನ್ನು ಓವರ್ ಟೇಕ್ ಮಾಡಲು ಹೋಗಿ ಲಾರಿ ಅಡಿಗೆ ಬಿದ್ದು ಬೈಕ್ ಸವಾರ ಸಾವು

- Advertisement -
- Advertisement -

ಕೊಡಗು; ಕಾರನ್ನು ಓವರ್ ಟೇಕ್ ಮಾಡಲು ಹೋಗಿ ಲಾರಿ ಅಡಿಗೆ ಬಿದ್ದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮಡಿಕೇರಿ ಸಮೀಪದ ಕಾಟಿಕೇರಿ ಸಮೀಪ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ನಡೆದಿದೆ. ಕಕ್ಕಬೆ ನಿವಾಸಿ ಶರತ್‌ (28) ಮೃತ ಬೈಕ್ ಸವಾರ.

ಶರತ್ ಕಾರನ್ನು ಹಿಂದಿಕ್ಕಿ ಹೋಗುತ್ತಿದ್ದಾಗ ಲಾರಿ ಅಡಿಗೆ ಬೈಕ್ ಸಮೇತ ಬಿದ್ದು ಸಾವನ್ನಪ್ಪಿದ್ದಾರೆ. ಮಡಿಕೇರಿ ಗ್ರಾಮಾಂತರ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡ ಹಾಗೂ ಎನ್ ಡಿ ಆರ್ ಎಫ್ ಕೊಡಗು ಸಂಪಾಜೆ ಭಾಗದ ಸದಸ್ಯ ನಾಗೇಶ್ ಈ ಸಂದರ್ಭದಲ್ಲಿ ರಸ್ತೆ ಸಂಚಾರ ಸಗಮಗೊಳಿಸಲು ಹಾಗೂ ಮೃತದೇಹ ಸಾಗಿಸಲು ಸಹಕರಿಸಿದರು.

- Advertisement -

Latest News

error: Content is protected !!