ಕಾರ್ಕಳ: ಕುಂಭಮೇಳಕ್ಕೆ ತೆರಳಿದ್ದ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಕಾಬೆಟ್ಟುವಿನಲ್ಲಿ ನಡೆದಿದೆ. ಸುಧಾಕರ ಪೂಜಾರಿ (69) ನಾಪತ್ತೆಯಾದವರು.
ಇವರು ದ ಜನವರಿ 25 ರಂದು ಉತ್ತರಪ್ರದೇಶದಲ್ಲಿ ನಡೆಯುತ್ತಿದ್ದ ಕುಂಭಮೇಳದ ಪ್ರಯುಕ್ತ ಪ್ರಯಾಗ್ ರಾಜ್ ಮತ್ತು ಕಾಶಿಗೆ ಹೋಗುವುದಾಗಿ ಮನೆಯಲ್ಲಿ ತಿಳಿಸಿ ಹೋದವರು ಈವರೆಗೆ ಮನೆಗೆ ಬಾರದೇ ನಾಪತ್ತೆಯಾದ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ಜನವರಿ 27 ರ ನಂತರ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದು, ಮನೆಯವರ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದ ವ್ಯಕ್ತಿಯು 5 ಅಡಿ ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ಹಿಂದಿ, ಇಂಗ್ಲೀಷ್, ತುಳು ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ನಗರ ಠಾಣೆ ದೂ.ಸಂಖ್ಯೆ: 08258-230213, 233100, ಮೊ.ನಂ: 9480805461 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾರ್ಕಳ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.