- Advertisement -
- Advertisement -
ಮಂಗಳೂರು; ಇಂದು ಚಂದ್ರ ದರ್ಶನವಾದ ಹಿನ್ನೆಲೆ ಕರಾವಳಿಯಲ್ಲಿ ನಾಳೆ (ಮಾರ್ಚ್ 31ರಂದು) ರಂಜಾನ್ ಹಬ್ಬ ಆಚರಣೆ ಮಾಡಲಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್, ಸೋಮವಾರ ಈದ್ ಉಲ್ ಫಿತರ್ (ರಂಜಾನ್ ) ಹಬ್ಬವನ್ನು ಆಚರಣೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ.
ದಕ್ಷಿಣಕನ್ನಡ, ಉಡುಪಿ, ಕಾಸರಗೋಡು ಸೇರಿದಂತೆ ಸೋಮವಾರ ಹಬ್ಬ ಆಚರಣೆ ಮಾಡಲು ಸೂಚಿಸಲಾಗಿದೆ. ನಾಳೆ ಈದ್ಗಾ ಮೈದಾನ ಹಾಗೂ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕವಾಗಿ ರಂಜಾನ್ ಹಬ್ಬವನ್ನು ಆಚರಿಸಲಿದ್ದಾರೆ.
- Advertisement -