ಉಡುಪಿ: ವ್ಯಕ್ತಿಯೊಂದಿಗೆ ಅಸಭ್ಯ ವರ್ತಿಸಿದ ಆರೋಪದಡಿ ಪೊಲೀಸ್ ಕಾನ್ಸ್ಟೇಬಲ್ ವಿರುದ್ಧ ಪ್ರಕರಣ ದಾಖಲಾದ ಘಟನೆ ಮಣಿಪಾಲದಲ್ಲಿ ನಡೆದಿದೆ.
ಸುಮಂತ್ ಎಂಬವರ ಜೊತೆ ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಶರಣ ಬಸವ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದ್ದು .ಈ ಬಗ್ಗೆ ಉಡುಪಿ ಪೊಲೀಸ್ ಇಲಾಖೆ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸ್ ಇಲಾಖೆ ಈ ಘಟನೆ ಬಗ್ಗೆ ವಿಚಾರಣೆ ನಡೆಸುತ್ತದೆ ಎನ್ನಲಾಗಿದೆ.
ದಿನಾಂಕ 27.03.2025ರಂದು ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಶರಣ ಬಸವ ಎನ್ನುವವರು ಸಾರ್ವಜನಿಕವಾಗಿ ಸುಮಂತ್ ಎಂಬವರೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಈ ಬಗ್ಗೆ ಸುಮಂತ್ ರವರು ಪೊಲೀಸ್ ಇಲಾಖೆಯ ಗಮನಕ್ಕೆ ತಂದು ಯಾವುದೇ ದೂರು ಬೇಡ ಎಂದು ತಿಳಿಸಿದ್ದು, ಪೊಲೀಸ್ ಇಲಾಖೆಯು ಸ್ವಯಂ ಪ್ರೇರಿತವಾಗಿ ಪೊಲೀಸ್ ಕಾನ್ಸ್ಟೇಬಲ್ ಶರಣ ಬಸವ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ. 92(o)&(r) ರಂತೆ ಪ್ರಕರಣ ದಾಖಲಿಸಿಕೊಂಡಿರುತ್ತದೆ ಹಾಗೂ ಈ ಬಗ್ಗೆ ಸೂಕ್ತ ಇಲಾಖಾ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.


