Tuesday, June 9, 2026
Homeತಾಜಾ ಸುದ್ದಿಐಎಫ್‌ಎಸ್ ಅಧಿಕಾರಿ ನಿಧಿ ತಿವಾರಿ ಪ್ರಧಾನಿ ಮೋದಿ ಅವರ ಆಪ್ತ ಕಾರ್ಯದರ್ಶಿಯಾಗಿ ನೇಮಕ

ಐಎಫ್‌ಎಸ್ ಅಧಿಕಾರಿ ನಿಧಿ ತಿವಾರಿ ಪ್ರಧಾನಿ ಮೋದಿ ಅವರ ಆಪ್ತ ಕಾರ್ಯದರ್ಶಿಯಾಗಿ ನೇಮಕ

- Advertisement -
- Advertisement -

ನವದೆಹಲಿ: 2014ರ ಬ್ಯಾಚ್‌ನ ಐಎಫ್‌ಎಸ್ ಅಧಿಕಾರಿ ನಿಧಿ ತಿವಾರಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ ಎಂದು ಸರ್ಕಾರ ಹೊರಡಿಸಿರುವ ಅಧಿಕೃತ ಆದೇಶದಲ್ಲಿ ತಿಳಿಸಿದೆ.

ನಿಧಿ ತಿವಾರಿ ಅವರು 2014 ರ ಬ್ಯಾಚ್ ಭಾರತೀಯ ವಿದೇಶಾಂಗ ಸೇವೆ (IFS) ಅಧಿಕಾರಿಯಾಗಿದ್ದು, ಈವರೆಗೂ ಅವರು ತಮ್ಮ ವೃತ್ತಿಜೀವನದಲ್ಲಿ ಹಲವು ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ.

ನವೆಂಬರ್ 2022 ರಿಂದ ಪ್ರಧಾನ ಮಂತ್ರಿಗಳ ಕಛೇರಿಯಲ್ಲಿ (PMO) ಉಪ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದಕ್ಕೂ ಮೊದಲು ಅವರು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಂತರಾಷ್ಟ್ರೀಯ ಭದ್ರತಾ ವ್ಯವಹಾರಗಳ ವಿಭಾಗದಲ್ಲಿ ಅಧೀನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು.

- Advertisement -

Latest News

error: Content is protected !!