Friday, June 5, 2026
Homeಕರಾವಳಿಮಂಗಳೂರುಮಂಗಳೂರು : ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಐವರ ಬಂಧನ

ಮಂಗಳೂರು : ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಐವರ ಬಂಧನ

- Advertisement -
- Advertisement -

ಮಂಗಳೂರು : ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಸೂರಲ್ಪಾಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ದುಗನಬೆಟ್ಟು ಹೌಸಿನ ಮೊಹಮ್ಮದ್ ತೌಸೀಫ್ (26), 62ನೇ ತೋಕೂರು ಗ್ರಾಮದ ನಡುಮನೆಯ ಆರಾಫತ್ ಅಲಿ (36), ಶಾಂತಿಗುಡ್ಡೆ ಹೌಸ್‌ನ ಮೊಹಮ್ಮದ್ ಅಫ್ರಿದ್ ಯಾನೆ ಅಪ್ಪಿ (27), ಮೂಡುಬಿದಿರೆ ಕೋಟೆಬಾಗಿಲಿನ ಅಬ್ದುಲ್ ನಜೀರ್ (31) ಹಾಗೂ ಬೆಳ್ತಂಗಡಿ ತಾಲೂಕಿನ ಕಾಶೀಪಟ್ಟ ಪೆರಂತಡ್ಕ ಫಾರೀಸ್ ಸಲ್ಮಾನ (26) ಬಂಧಿತರು.

ಆರೋಪಿಗಳು ಮೂಡುಬಿದಿರೆ ಕಡೆಯಿಂದ ಕೈಕಂಬ ಕಡೆಗೆ ಟೆಂಪೋದಲ್ಲಿ ದನಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದುದನ್ನು ಬಜಪೆ ಪೊಲೀಸರು ಪತ್ತೆ ಹಚ್ಚಿದ್ದು, ಪ್ರಕರಣಕ್ಕೆ ಸಂಬಂಧಿಸಿ ಐವರನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಇನ್ನೂ ಕೆಲವರು ತಲೆಮರೆಸಿಕೊಂಡಿದ್ದು, ಅವರ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!