Friday, June 5, 2026
Homeಕರಾವಳಿಉಡುಪಿಟಿಪ್ಪರ್‌ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಗ್ರಾಮ ಪಂಚಾಯತ್‌ ಸದಸ್ಯೆ ಸಾವು

ಟಿಪ್ಪರ್‌ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಗ್ರಾಮ ಪಂಚಾಯತ್‌ ಸದಸ್ಯೆ ಸಾವು

- Advertisement -
- Advertisement -

ಬ್ರಹ್ಮಾವರ: ಮಾಬುಕಳ ಸೇತುವೆ ಬಳಿ ರಾ.ಹೆ.ಯಲ್ಲಿ ಗುರುವಾರ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಗ್ರಾಮ ಪಂಚಾಯತ್‌ ಸದಸ್ಯೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಮೃತಪಟ್ಟವರು ಬಾರಕೂರು ಮಾಸ್ತಿನಗರದ ಮಮ್ತಾಜ್‌ (44).

ಘಟನೆಯ ವಿವರ: ಬಾರಕೂರಿನ ಪೂರ್ಣಿಮಾ ಮತ್ತು ಮಮ್ತಾಜ್‌ ಸ್ಕೂಟಿಯಲ್ಲಿ ಸಾಸ್ತಾನ ಕಡೆ ತೆರಳುತ್ತಿದ್ದರು. ಈ ಸಂದರ್ಭ ಹಿಂದಿನಿಂದ ಬರುತ್ತಿದ್ದ ಟಿಪ್ಪರ್‌ ಸ್ಕೂಟಿಗೆ ಢಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ಇಬ್ಬರೂ ರಸ್ತೆಗೆ ಬಿದ್ದು ಗಾಯಗೊಂಡರು. ಅವರನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಮ್ತಾಜ್‌ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಅವರು ಹನೆಹಳ್ಳಿ ಗ್ರಾ.ಪಂ. ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಚಾಲಕ ಟಿಪ್ಪರ್‌ ನಿಲ್ಲಿಸದೆ ಪರಾರಿಯಾಗಿದ್ದಾನೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!