Wednesday, June 3, 2026
Homeಕರಾವಳಿಉಡುಪಿಉಡುಪಿ: ಬಸ್ ಏಜೆಂಟ್ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣು

ಉಡುಪಿ: ಬಸ್ ಏಜೆಂಟ್ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣು

- Advertisement -
- Advertisement -

ಉಡುಪಿ: ಬಸ್ ಏಜೆಂಟ್ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬನ್ನಂಜೆಯಲ್ಲಿ ನಡೆದಿದೆ. ಮಂಜುನಾಥ್ ಶೆಣೈ (72) ಮೃತ ವ್ಯಕ್ತಿ.ಮಂಜುನಾಥ್  ಬಸ್ ಏಜೆಂಟ್ ಆಗಿ ಕೆಲಸ ಮಾಡಿಕೊಂಡಿದ್ದರು.

ಮಂಜುನಾಥ್ ಬಾವಿಗೆ ಹಾರಿ ಬೊಬ್ಬಿಡುವ ಶಬ್ದ ಕೇಳಿ ಸ್ಥಳಕ್ಕೆ ಬಂದ ಸ್ಥಳೀಯರು, ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳದವರು ಹಗ್ಗದ ಸಹಾಯದಿಂದ ಬಾವಿಯಲ್ಲಿದ್ದ ಅವರನ್ನು ಮೇಲಕ್ಕೆತ್ತಿದ್ದಾರೆ. ತಕ್ಷಣ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿ, ಪರೀಕ್ಷೆಗೆ ಒಳಪಡಿಸಿದಾಗ ವೈದ್ಯರು ವ್ಯಕ್ತಿ ಮೃತಪಟ್ಟಿರೋದಾಗಿ ತಿಳಿಸಿದ್ದಾರೆ.ಆತ್ಮಹತ್ಯೆಗೆ ಸ್ವಷ್ಟ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!