Wednesday, June 3, 2026
Homeಚಿಕ್ಕಮಗಳೂರುಚಿಕ್ಕಮಗಳೂರು; ಮನೆ ಮೇಲೆ ಬಿದ್ದ ಕೆಎಸ್ ಆರ್ ಟಿಸಿ ಬಸ್

ಚಿಕ್ಕಮಗಳೂರು; ಮನೆ ಮೇಲೆ ಬಿದ್ದ ಕೆಎಸ್ ಆರ್ ಟಿಸಿ ಬಸ್

- Advertisement -
- Advertisement -

ಚಿಕ್ಕಮಗಳೂರು; ಕೆಎಸ್ ಆರ್ ಟಿಸಿ ಬಸ್ ಮನೆ ಮೇಲೆ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಲದುರ್ಗ ಬಳಿ ನಡೆದಿದೆ.

ಬೆಂಗಳೂರಿನಿಂದ ಶೃಂಗೇರಿಗೆ ಹೋಗುತ್ತಿದ್ದ ಸರ್ಕಾರಿ ಬಸ್ ಜಲದುರ್ಗ ಬಳಿ ರಸ್ತೆ ಕೆಳಗಿದ್ದ ಮನೆ ಮೇಲೆ ಬಿದ್ದಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಬಸ್ಸಿನಲ್ಲಿದ್ದ 50 ಜನರಲ್ಲಿ 20 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಜಯಪುರ, ಕೊಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!