Monday, June 8, 2026
Homeಕರಾವಳಿಉಡುಪಿ ಉಡುಪಿ; ಕಾರು ಡಿಕ್ಕಿ ಹೊಡೆದು ಪಾದಚಾರಿ ಮಹಿಳೆ ಸ್ಥಳದಲ್ಲೇ ಸಾವು

 ಉಡುಪಿ; ಕಾರು ಡಿಕ್ಕಿ ಹೊಡೆದು ಪಾದಚಾರಿ ಮಹಿಳೆ ಸ್ಥಳದಲ್ಲೇ ಸಾವು

- Advertisement -
- Advertisement -

ಉಡುಪಿ; ಕಾರು ಡಿಕ್ಕಿ ಹೊಡೆದು ಪಾದಚಾರಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ  ರಾಷ್ಟ್ರೀಯ ಹೆದ್ದಾರಿ 66 ರ ಕೋಟ ಮಣೂರು ರಾಜಲಕ್ಷ್ಮಿ ಸಭಾ ಭವನ ಹತ್ತಿರ ನಡೆದಿದೆ. ಮೃತಪಟ್ಟ ಮಹಿಳೆ ಗಿಳಿಯಾರು ಹೊನ್ನಾರಿಯ ಗಿರಿಜಾ ಪೂಜಾರ್ತಿ (65) ಮೃತ ಮಹಿಳೆ.

ಬನ್ನಾಡಿಯಿಂದ ಕುಂದಾಪುರ ಕಡೆ ಹೋಗುತ್ತಿದ್ದ ಕಾರೊಂದು ಚಾಲಕ ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದಿದೆ.

ಘಟನೆಯಿಂದ ಗಂಭೀರ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ..

ಘಟನಾಸ್ಥಳಕ್ಕೆ ಕೋಟ ಪೊಲೀಸ್ ಠಾಣೆಯ ಎಎಸ್ಐ ಗೋಪಾಲ್ ಪೂಜಾರಿ, ಸಿಬ್ಬಂದಿ ಅಶೋಕ್ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!