Thursday, June 4, 2026
Homeತಾಜಾ ಸುದ್ದಿಸಪ್ಟೆಂಬರ್ ನಲ್ಲಿ ಶಾಲೆ ಆರಂಭವಾಗುವುದು ನಿಜವೇ ? ಶಿಕ್ಷಣ ಸಚಿವರಿಂದ ಬಹುಮುಖ್ಯ ಮಾಹಿತಿ

ಸಪ್ಟೆಂಬರ್ ನಲ್ಲಿ ಶಾಲೆ ಆರಂಭವಾಗುವುದು ನಿಜವೇ ? ಶಿಕ್ಷಣ ಸಚಿವರಿಂದ ಬಹುಮುಖ್ಯ ಮಾಹಿತಿ

- Advertisement -
- Advertisement -

ಬೆಂಗಳೂರು: ಸೆಪ್ಟೆಂಬರ್ ತಿಂಗಳ ನಂತರ ರಾಜ್ಯದಲ್ಲಿ ಶಾಲೆಗಳು ಆರಂಭವಾಗಲಿದೆ ಎಂಬ ಸುದ್ದಿ ಎಲ್ಲ ಕಡೆ ಹರಿದಾಡುತ್ತಿರುವ ಬಗ್ಗೆ ಸ್ಪಷ್ಟನೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸಚಿವ ಸುರೇಶ್ ಕುಮಾರ್, ಶಾಲೆ ಆರಂಭದ ಬಗ್ಗೆ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ ಎಂದು ತಿಳಿಸಿದ್ದಾರೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಶಾಲೆಗಳನ್ನು ತೆರೆಯುತ್ತೇವೆಂದು ಸರ್ಕಾರ ನಿರ್ಧೆರಿಸಿಲ್ಲ. ನಮ್ಮ ಅಧಿಕಾರಿಗಳು ಸಭೆಯೊಂದರಲ್ಲಿ ಭಾಗವಹಿಸಿದಾದ ವ್ಯಕ್ತಪಡಿಸಿರಬಹುದಾದ ಸಾಮಾನ್ಯ ಅಭಿಪ್ರಾಯವಷ್ಟೇ, ಆದರೆ ಇದನ್ನು ಹೀಗೆ ಬಿಂಬಿಸಲಾಗಿದೆ ಎಂದು ಸ್ಪಷ್ಟನೆ ನೀಡಿದರು.

ಸದ್ಯಕ್ಕೆ ಶಾಲೆಗಳನ್ನು ತೆರೆಯುವ ಬಗ್ಗೆ ಸರ್ಕಾರ ಯಾವುದೇ ಯೋಚನೆ ಮಾಡಿಲ್ಲ, ಪೋಷಕರು ಅನಾವಶ್ಯಕವಾಗಿ ಆತಂಕ ಪಡುವುದು ಬೇಡ ಎಂದು ಸಚಿವರು ಸ್ಪಷ್ಟನೆ ನೀಡಿದ್ದಾರೆ.

- Advertisement -

Latest News

error: Content is protected !!