ಪುತ್ತೂರು: ಬ್ರಾಹ್ಮಣರು ಮತ್ತೆ ಪರಶುರಾಮನಂತೆ ಕೊಡಲಿಯನ್ನು ಕೈಗೆತ್ತಿಕೊಳ್ಳಬೇಕಾದೀತು ಎಂದು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹೇಳಿಕೆ ನೀಡಿದ್ದಾರೆ.
ಬೀದರ್ ಜಿಲ್ಲೆಯಲ್ಲಿ ಸಿಇಟಿ ಪರೀಕ್ಷೆಯ ವೇಳೆ ವಿದ್ಯಾರ್ಥಿಯ ಜನಿವಾರ ತೆಗೆಸಿದ ಪ್ರಕರಣವನ್ನು ಖಂಡಿಸಿ ಪುತ್ತೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾ ಭಾಷಣ ಮಾಡಿದ ಅರುಣ್ ಕುಮಾರ್ ಪುತ್ತಿಲ ಈ ಹೇಳಿಕೆ ನೀಡಿದ್ದಾರೆ.
ಬ್ರಾಹ್ಮಣ ಸಮುದಾಯದ ಮೇಲಿನ ಈ ದೌರ್ಜನ್ಯವನ್ನು ಸಹಿಸಲು ಸಾಧ್ಯವಿಲ್ಲವಾಗಿದ್ದು, ಇದರ ಹಿಂದೆ ರಾಜ್ಯ ಸರ್ಕಾರದ ಕುಮ್ಮಕ್ಕಿದೆ ಎಂದು ಅರುಣ್ ಕುಮಾರ್ ಪುತ್ತಿಲ ಆರೋಪಿಸಿದ್ದಾರೆ.
ಗೃಹ ಸಚಿವ ಡಾ. ಜಿ. ಪರಮೇಶ್ವರ್ ಜನಿವಾರ ತೆಗೆಸಿದ ಘಟನೆಯ ಬಗ್ಗೆ ತಾತ್ಸಾರದಿಂದ ಕೂಡಿಸ ಹೇಳಿಕೆಯನ್ನು ನೀಡುತ್ತಿದ್ದು,ನನಗೇನೂ ಗೊತ್ತಿಲ್ಲ ಎಂಬಂತೆ ನಟನೆ ಮಾಡುತ್ತಿದ್ದಾರೆ ಎಂದೂ ಪುತ್ತಿಲ ಟೀಕಿಸಿದ್ದಾರೆ.
ಅಖಿಲ ಭಾರತ ಬ್ರಾಹ್ಮಣ ಮಹಾಸಭಾದಿಂದ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಇಂದು ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು.


