Monday, June 8, 2026
Homeಕರಾವಳಿಮಂಗಳೂರುಪಹಲ್ಗಾಮ್ ಉಗ್ರರ ದಾಳಿ ಖಂಡಿಸಿ ಮಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ

ಪಹಲ್ಗಾಮ್ ಉಗ್ರರ ದಾಳಿ ಖಂಡಿಸಿ ಮಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ

- Advertisement -
- Advertisement -

ಮಂಗಳೂರು: ಜಮ್ಮು ಕಾಶ್ಮಿರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಿನ್ನೆ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಮಂಗಳೂರಿನಲ್ಲಿ ಇಂದು ಪ್ರತಿಭಟನೆ ನಡೆಯಿತು.

ಮಂಗಳೂರು ನಗರದ ಕ್ಲಾಕ್ ಟವರ್ ಬಳಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯಿಂದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನೆಯಲ್ಲಿ‌ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಪ್ರತಿಭಟನೆಗೂ ಮೊದಲು ಮೌನ ಪ್ರಾರ್ಥನೆ ಮೂಲಕ ನಿನ್ನೆಯ ದಾಳಿಯಲ್ಲಿ ಮೃತಪಟ್ಟ ಪ್ರವಾಸಿಗರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

- Advertisement -

Latest News

error: Content is protected !!