Monday, June 8, 2026
HomeWorldಉಗ್ರರ ದಾಳಿಯಲ್ಲಿ ಮೃತಪಟ್ಟ ಭರತ್‌ ಭೂಷಣ್‌ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಸಾಂತ್ವನ

ಉಗ್ರರ ದಾಳಿಯಲ್ಲಿ ಮೃತಪಟ್ಟ ಭರತ್‌ ಭೂಷಣ್‌ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಸಾಂತ್ವನ

- Advertisement -
- Advertisement -

ಬೆಂಗಳೂರು : ಪೆಹಲ್ಗಾಮನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟ ಭರತ್‌ ಭೂಷಣ್‌ ಅವರ ಪಾರ್ಥಿವ ಶರೀರವನ್ನು ಗುರವಾರ ಬೆಳಿಗ್ಗೆ 5:30ರ ಹೊತ್ತಿಗೆ ಇಲ್ಲಿನ ಸುಂದರ ನಗರಕ್ಕೆ ತರಲಾಗಿದ್ದು, ಸಿಎಂ ಸಿದ್ದರಾಮಯ್ಯ ಭರತ್‌ ನಿವಾಸಕ್ಕೆ ತೆರಳಿ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ಹೇಳಿದರು. 

ನಂತರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ‘ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರವನ್ನು ಘೋಷಿಸಲಾಗಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯವಾಗಿದೆ,” ಎಂದರು.

ಕಾರ್ಮಿಕ ಸಚಿವ ಸಂತೋಷ್ ಲಾಡ್ ಹಾಗೂ ಅಧಿಕಾರಿಗಳ ತಂಡವನ್ನು ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆ ಹಾಗೂ ಘಟನೆಯಲ್ಲಿ ಮೃತಪಟ್ಟವರ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ಕರೆತರುವ ವ್ಯವಸ್ಥೆಗಾಗಿ ಕೂಡಲೇ ಕಳುಹಿಸಿಕೊಡಲಾಗಿತ್ತು. 175 ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುತ್ತಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದರು.

ಕೇಂದ್ರ ಸರ್ಕಾರ ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ಸಂಬಂಧಿಸಿದಂತೆ ಕೆಲವು ಕ್ರಮಗಳನ್ನು ಈಗಾಗಲೇ ಕೈಗೊಂಡಿದೆ. ಉಗ್ರರನ್ನು ಮಟ್ಟ ಹಾಕುವ ಇನ್ನೂ ಹೆಚ್ಚಿನ ಕ್ರಮಗಳಿಗೆ ರಾಜ್ಯಸರ್ಕಾರದ ಸಂಪೂರ್ಣ ಬೆಂಬಲವಿರಲಿದೆ ಎಂದು ತಿಳಿಸಿದರು. 

- Advertisement -

Latest News

error: Content is protected !!