Saturday, June 6, 2026
Homeಕರಾವಳಿಕ್ರೈಸ್ತ ಧರ್ಮಗುರು ಪೋಪ್ ಫ್ರಾನ್ಸಿಸ್ ಅಂತ್ಯಕ್ರಿಯೆಯಲ್ಲಿ ರಾಜ್ಯ ಸರ್ಕಾರದ ಪರವಾಗಿ ಭಾಗಿಯಾಗಲಿರುವ ಎಂಎಲ್ಸಿ ಐವಾನ್ ಡಿಸೋಜ

ಕ್ರೈಸ್ತ ಧರ್ಮಗುರು ಪೋಪ್ ಫ್ರಾನ್ಸಿಸ್ ಅಂತ್ಯಕ್ರಿಯೆಯಲ್ಲಿ ರಾಜ್ಯ ಸರ್ಕಾರದ ಪರವಾಗಿ ಭಾಗಿಯಾಗಲಿರುವ ಎಂಎಲ್ಸಿ ಐವಾನ್ ಡಿಸೋಜ

- Advertisement -
- Advertisement -

ಬೆಂಗಳೂರು: ಶನಿವಾರ ನಡೆಯಲಿರುವ ಕ್ರೈಸ್ತ ಧರ್ಮ ಗುರು ಪೋಪ್ ಫ್ರಾನ್ಸಿಸ್ ಅವರ ಅಂತ್ಯಕ್ರಿಯೆಯಲ್ಲಿ ಕರ್ನಾಟಕ ಸರ್ಕಾರದ ಪ್ರತಿನಿಧಿಯಾಗಿ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಪಾಲ್ಗೊಳ್ಳಲಿದ್ದಾರೆ.

ರಾಜ್ಯ ಸರ್ಕಾರದ ಪ್ರತಿನಿಧಿಗಳಾಗಿ ಸಚಿವ ಕೆ.ಜೆ. ಜಾರ್ಜ್ ಮತ್ತು ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ಅವರನ್ನು ನಿಯೋಜಿಸಿ ಅಧಿಸೂಚನೆ ಹೊರಡಿಸಲಾಗಿದೆ.

ಧರ್ಮ ಗುರು ಪೋಪ್ ಫ್ರಾನ್ಸಿಸ್ ಅವರು ಕಳೆದ ಸೋಮವಾರದಂದು ಮರಣ ಹೊಂದಿದ್ದು, ಶನಿವಾರ ಬೆಳಗ್ಗೆ ವ್ಯಾಟಿಕನ್ ಸಿಟಿಯ ಸೈಂಟ್ ಪೀಟರ್ಸ್ ಸ್ಕ್ವೇರ್ ನಲ್ಲಿ ಜರುಗಲಿದೆ.

ಈ ಮಧ್ಯೆ ಇಂದು ಪೋಪ್ ನಿಧನದ ಹಿನ್ನೆಲೆಯಲ್ಲಿ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚನಾ ಪತ್ರವನ್ನು ಕಳುಹಿಸಿದ್ದಾರೆ.

- Advertisement -

Latest News

error: Content is protected !!