Saturday, June 6, 2026
Homeಮನರಂಜನೆನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಸರ್ಜಾಗೂ ಕೊರೊನಾ ಪಾಸಿಟಿವ್

ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಸರ್ಜಾಗೂ ಕೊರೊನಾ ಪಾಸಿಟಿವ್

- Advertisement -
- Advertisement -

ಚೆನ್ನೈ : ಮೊನ್ನೆಯಷ್ಟೇ ನಟ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾ ಶಂಕರ್ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಅವರಿಬ್ಬರು ಆಸ್ಪ್ರಗೆ ದಾಖಲಾಗಿ ಚಿಕಿತ್ಸೆ ಪಡೆದು ಮೊನ್ನೆ ಮನೆಗೆ ವಾಪಸ್ಸಾಗಿದ್ದರು. ಅಲ್ಲದೇ ಮನೆಯಲ್ಲೇ ಸ್ವಯಂ ಕ್ವಾರಂಟೈನ್ ಕೂಡ ಆಗಿದ್ದಾರೆ. ಹೀಗಿರುವಾಗಲೇ ಸರ್ಜಾ ಕುಟುಂಬದ ಮತ್ತೊಬ್ಬರಿಗೆ ಕೋವಿಡ್ ದೃಢಪಟ್ಟಿದೆ.

ಅರ್ಜುನಾ ಅವರ ಹಿರಿಯ ಪುತ್ರಿ ನಟಿ ಐಶ್ವರ್ಯಾ ಸರ್ಜಾ ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಾಕಿ ಸ್ಪಷ್ಟಪಡಿಸಿದ್ದಾರೆ ಐಶ್ವರ್ಯಾ. ನನಗೆ ಕೊರೊನಾ ಪಾಸಿಟಿವ್ ಆಗಿದೆ ಎಂದು ಗೊತ್ತಾಯ್ತು. ಹಾಗಾಗಿ ನಾನೀನ ಹೋಮ್ ಕ್ವಾರಂಟೈನ್ ನಲ್ಲಿದ್ದೇನೆ. ಅಲ್ಲದೇ ಅಗತ್ಯವಿರುವ ಎಲ್ಲಾ ಚಿಕಿತ್ಸೆಗಳನ್ನು ವೈದ್ಯರ ಮಾರ್ದರ್ಶನದಂತೆ ಪಡೆದುಕೊಳ್ಳುತ್ತಿದ್ದೇನೆ. ಯಾರಾದರೂ ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

- Advertisement -

Latest News

error: Content is protected !!