Saturday, June 6, 2026
Homeಕರಾವಳಿದ.ಕ.ಜಿಲ್ಲಾ ಕಾಂಗ್ರೆಸ್ ವತಿಯಿಂದ ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿ ಮೇಣದ ಬತ್ತಿ ಮೆರವಣಿಗೆ

ದ.ಕ.ಜಿಲ್ಲಾ ಕಾಂಗ್ರೆಸ್ ವತಿಯಿಂದ ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿ ಮೇಣದ ಬತ್ತಿ ಮೆರವಣಿಗೆ

- Advertisement -
- Advertisement -

ಮಂಗಳೂರು: ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಹುತಾತ್ಮರಾದವರಿಗೆ ದ.ಕ.ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದ ಎದುರು ಶುಕ್ರವಾರದಂದು ಮೊಂಬತ್ತಿ ಹಿಡಿದು ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು.

ನಂತರದಲ್ಲಿ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ‘ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯು ಭಯನಕವಾಗಿದ್ದು, ಅಮಾಯಕರ ಮೇಲೆ ಭಯೋತ್ಪಾದಕರು ಅತ್ಯಂತ ಅಮಾನುಷವಾಗಿ ಗುಂಡಿಕ್ಕಿ ಹತ್ಯೆ ಮಾಡಿರುವುದು ಖಂಡನೀಯ. ಈ ಭಯೋತ್ಪಾದನೆಯ ವಿರುದ್ಧ ನಾವೆಲ್ಲ ಒಟ್ಟಾಗಿ ಹೋರಾಟ ಮಾಡಬೇಕು,’ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

- Advertisement -

Latest News

error: Content is protected !!