Wednesday, June 3, 2026
Homeಉದ್ಯಮಬಂದಾರು, ಮೊಗ್ರು, ಕಣಿಯೂರು ಗ್ರಾಮಗಳಲ್ಲಿ ತೀವ್ರ ನೆಟ್‌ವರ್ಕ್ ಸಮಸ್ಯೆ; ಗ್ರಾಹಕರು ಸೇರಿದಂತೆ ಉದ್ಯೋಗಿಗಳು, ವಿದ್ಯಾರ್ಥಿಗಳು ಪರದಾಡಬೇಕಾದ...

ಬಂದಾರು, ಮೊಗ್ರು, ಕಣಿಯೂರು ಗ್ರಾಮಗಳಲ್ಲಿ ತೀವ್ರ ನೆಟ್‌ವರ್ಕ್ ಸಮಸ್ಯೆ; ಗ್ರಾಹಕರು ಸೇರಿದಂತೆ ಉದ್ಯೋಗಿಗಳು, ವಿದ್ಯಾರ್ಥಿಗಳು ಪರದಾಡಬೇಕಾದ ಸ್ಥಿತಿ ನಿರ್ಮಾಣ; ಸಮಸ್ಯೆಗೆ ಶೀಘ್ರ ಪರಿಹಾರ ಸಿಗದಿದ್ದಲ್ಲಿ ಗ್ರಾಮಸ್ಥರಿಂದ ಪ್ರತಿಭಟನೆಗೆ ಸಿದ್ಧತೆ

- Advertisement -
- Advertisement -

ಬೆಳ್ತಂಗಡಿ : ಇಲ್ಲಿನ ಪ್ರದೇಶಗಳಾದ ಬಂದಾರು, ಮೊಗ್ರು, ಕಣಿಯೂರು ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಸಾರ್ವಜನಿಕರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಡಿಯಲ್ಲಿ ಬರುವ ಬೈಪಾಡಿ, ಪಾಣೆಕಲ್ಲು, ಮೊಗ್ರು, ಮೈರೋಳ್ತಡ್ಕ, ಊoತನಾಜೆ, ಮುಗೇರಡ್ಕ, ಪದ್ಮುಂಜ, ಕಣಿಯೂರು ಪ್ರದೇಶದಲ್ಲಿ ಊರಿನ ಅಕ್ಕ -ಪಕ್ಕದಲ್ಲೆ ಟವರ್ ಇದ್ದರೂ ಸಾರ್ವಜನಿಕರು ನೆಟ್ವರ್ಕ್ ಇಲ್ಲದೆ ಪರದಾಟ ನಡೆಸುವ ಸ್ಥಿತಿ ನಿರ್ಮಾಣವಾಗಿದೆ.

ಇದರಿಂದಾಗಿ ವರ್ಕ್ ಪ್ರಮ್ ಹೋಂ ಉದ್ಯೋಗಿಗಳು, ವಿದ್ಯಾರ್ಥಿಗಳು ಬಹಳಷ್ಟು ತೊಂದರೆಯನ್ನು ಎದುರಿಸುವಂತಾಗಿದೆ. ಇನ್ನೊಂದು ಕಡೆಗೆ ಇಂಟೆರ್ ನೆಟ್ ಸಮಸ್ಯೇ ಮಾತ್ರವಲ್ಲದೇ ಕಾಲ್ ಮಾಡಿ ಮಾತನಾಡಲು ನೆಟ್ ವರ್ಕ್ ಸಿಗದಂತಹ ಪರಿಸ್ಥಿತಿ ಎದುರಾಗಿದೆ. ಇದರಿಂದಾಗಿ ಸಾರ್ವಜನಿಕರು ಸೇರಿದಂತೆ ಗ್ರಾಹಕರು ಬಹಳಷ್ಟು ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ.

ಈಗಾಗಲೇ ಈ ಸಮಸ್ಯೆಯ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ, ಸಮಸ್ಯೆಯ ಬಗ್ಗೆ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಮುಂದಿನ ದಿನಗಳಲ್ಲಿ ಸಮಸ್ಯೆ ಹೀಗೆಯೇ ಮುಂದುವರಿದರೆ ಪ್ರತಿಭಟನೆಗೆ ಗ್ರಾಮಸ್ಥರು ಮುಂದಾಗಿದ್ದಾರೆ ಅನ್ನುವ ಮಾಹಿತಿ ಲಭ್ಯವಾಗಿದೆ.

- Advertisement -

Latest News

error: Content is protected !!