Saturday, June 6, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ : ಆರೋಪಿ ಸಯ್ಯದ್ ಬಂಧನ; ಪೋಕ್ಸೋ ಪ್ರಕರಣ...

ಬೆಳ್ತಂಗಡಿ : ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ : ಆರೋಪಿ ಸಯ್ಯದ್ ಬಂಧನ; ಪೋಕ್ಸೋ ಪ್ರಕರಣ ದಾಖಲು

- Advertisement -
- Advertisement -

ಬೆಳ್ತಂಗಡಿ : ಖಾಸಗಿ ಕಾಲೇಜ್ ವಿದ್ಯಾರ್ಥಿನಿಗೆ ಕಬ್ಬಡಿ ಆಟಗಾರ ಮೆಸೇಜ್ ಕಳುಹಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಹಿಂದೂ ಸಂಘಟನೆ ಕಾರ್ಯಕರ್ತರು ಏ.26 ರಂದು ಉಜಿರೆಯಲ್ಲಿ ಆರೋಪಿ ವಾಲಿಬಾಲ್ ಆಟಗಾರ ಕಾರ್ಕಳ ನಿವಾಸಿ ಸಯ್ಯದ್(24) ಎಂಬಾತನಿಗೆ ಥಳಿಸಿದ್ದಾರೆ. ಬಳಿಕ ಆತನ ಮೊಬೈಲ್ ಪರಿಶೀಲನೆ ನಡೆಸಿದಾಗ ನೂರಾರು ಯುವತಿಯ ಹಾಗೂ ಆತನ ಅಶ್ಲೀಲ ಫೋಟೋ, ವಿಡಿಯೋಗಳು ಪತ್ತೆಯಾಗಿದೆ. ಆರೋಪಿಯನ್ನು ಹಿಂದೂ ಕಾರ್ಯಕರ್ತರು ಬೆಳ್ತಂಗಡಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದರು.

ಅಪ್ರಾಪ್ತ ವಿದ್ಯಾರ್ಥಿನಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ನೀಡಿದ ದೂರನಂತೆ ಏ.26 ರಂದು ಸಯ್ಯದ್ ನನ್ನು ಪೋಕ್ಸೋ ಪ್ರಕರಣ ದಾಖಲಿಸಿ ಬಂಧಿಸಿ ಮಂಗಳೂರು ಫೋಕ್ಸೋ ನ್ಯಾಯಾಲಯದ ನ್ಯಾಯಾಧೀಶರ ಮನೆಗೆ ರಾತ್ರಿ ಹಾಜರುಪಡಿಸಿದ್ದು.‌ ನ್ಯಾಯಾಧೀಶರು ಆರೋಪಿಗೆ ಜಾಮೀನು ಮಂಜೂರು ಮಾಡಿದ್ದಾರೆ.

- Advertisement -

Latest News

error: Content is protected !!