- Advertisement -
- Advertisement -
ಶ್ರೀಲೀಲಾ, ಕಾರ್ತಿಕ್ ಆರ್ಯನ್ ಅಭಿನಯದ ಬಾಲಿವುಡ್ ಚಿತ್ರದಲ್ಲಿ ನಟಿಸುತ್ತಿದ್ದು, ಇದೀಗ ಈ ಚಿತ್ರ ಬಿಡುಗಡೆಗೊಳ್ಳುವ ಮುನ್ನವೇ ಶ್ರೀಲೀಲಾ ಇನ್ನೊಂದು ಬಾಲಿವುಡ್ ಚಿತ್ರದಲ್ಲಿ ನಟಿಸುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.
ಈ ಬಾರಿ ಅವರು ಸಿದ್ಧಾರ್ಥ್ ಮಲ್ಹೋತ್ರಾ ಜೊತೆಗೆ ನಟಿಸುತ್ತಾರೆ ಎಂದು ಹೇಳಲಾಗಿದೆ. ನಿರ್ದೇಶಕ ರಾಜ್ ಶಾಂಡಿಲ್ಯ ಅವರು ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ ಎನ್ನಲಾಗುತ್ತಿದ್ದು, ಸಿದ್ಧಾರ್ಥ್ ಮಲ್ಹೋತ್ರಾ ನಾಯಕ ಹಾಗೂ ಈ ಚಿತ್ರದಲ್ಲಿ ಇಬ್ಬರು ನಾಯಕಿಯರಿದ್ದು, ಒಬ್ಬ ನಾಯಕಿಯ ಪಾತ್ರಕ್ಕೆ ಶ್ರೀಲೀಲಾ ಅವರನ್ನು ಆಯ್ಕೆಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
- Advertisement -