Wednesday, June 24, 2026
Homeತಾಜಾ ಸುದ್ದಿರಾಜ್ಯದ ಮುಖ್ಯಮಂತ್ರಿಗಳು ದೇಶದ ಜನರಲ್ಲಿ ಕ್ಷಮೆ ಕೇಳಲಿ: ಬಿ.ವೈ.ವಿಜಯೇಂದ್ರ ಒತ್ತಾಯ

ರಾಜ್ಯದ ಮುಖ್ಯಮಂತ್ರಿಗಳು ದೇಶದ ಜನರಲ್ಲಿ ಕ್ಷಮೆ ಕೇಳಲಿ: ಬಿ.ವೈ.ವಿಜಯೇಂದ್ರ ಒತ್ತಾಯ

- Advertisement -
- Advertisement -

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯ ಕುರಿತಂತೆ ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪಾಕಿಸ್ತಾನದ ವಿರುದ್ಧ ಯುದ್ಧದ ಅನಿವಾರ್ಯತೆ ಇಲ್ಲ ಎಂದು ತಿಳಿಸಿದ್ದು, ಇದೀಗ ಇದಕ್ಕೆ ಸಂಬಂಧಿಸಿದಂತೆ ದೇಶದ ಜನತೆ ಬಳಿ ಕ್ಷಮೆ ಕೇಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.

ಈ ಕುರಿತು ಅವರು ಬೆಂಗಳೂರಿನಲ್ಲಿ ಮಾಧ್ಯಮವರೊಂದಿಗೆ ಮಾತನಾಡಿ, “ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹಿಂದೂಗಳನ್ನೇ ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದಾರೆ. ಇದರಿಂದಾಗಿ ಸಿಟ್ಟಿಗೆದ್ದಿರುವ ಕೇಂದ್ರ ಸರ್ಕಾರ ಪಾಕ್‌ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಆದರೆ ಇಂತಹ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ಪಾಕ್‌ ವಿರುದ್ಧ ಯುದ್ಧದ ಅನಿವಾರ್ಯತೆ ಇಲ್ಲ ಎಂದು ಹೇಳಿಕೆ ನೀಡಿರುವುದು ಸರಿಯಲ್ಲ,” ಎಂದು ಕಿಡಿಕಾರಿದರು.

- Advertisement -

Latest News

error: Content is protected !!