Sunday, June 14, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಲಾಯಿಲದಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಬೆಳ್ತಂಗಡಿ : ಲಾಯಿಲದಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

- Advertisement -
- Advertisement -

ಬೆಳ್ತಂಗಡಿ :ಬಿಹಾರದಿಂದ ಕೆಲಸಕ್ಕೆಂದು ಬಂದಿದ್ದ ಯುವಕನೋರ್ವ ಬೆಳ್ತಂಗಡಿಯ ಲಾಯಿಲದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಿಹಾರ ರಾಜ್ಯದ ನಿವಾಸಿಯಾದ ನಂದಕುಮಾರ್(20) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.‌

ಈತ ತನ್ನ ಸಹೋದರನೊಂದಿಗೆ ಕೆಲಸಕ್ಕೆಂದು ಬಂದಿದ್ದ ಏ.27ರಂದು ಮದ್ಯಾಹ್ನದ ವೇಳೆ ಉಜಿರೆ ಕಾಶಿಬೆಟ್ಟುವಿನಲ್ಲಿರುವ ಸಹೋದರನ ಬಾಡಿಗೆ ರೂಮಿನ ಕೀತೆಗೆದುಕೊಂಡು ಹೋದ ನಂದಕುಮಾರ್ ಮರಳಿ ಬರದಿದ್ದಾಗ ರೂಮಿಗೆ ಹೋಗಿ ಪರಿಶೀಲಿಸಿದಾಗ ಕೊಠಡಿಯ ಒಳಗಿನ ಫ್ಯಾನಿಗೆ ನೈಲಾನ್ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಕಡಿಕೊಂಡಿರುವುದು ಕಂಡು ಬಂದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಲಾಗಿದ್ದು ಬೆಳ್ತಂಗಡಿ ಪೊಲೀಸರು ಪ್ರಕರಣ‌ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!