Wednesday, June 24, 2026
Homeಕರಾವಳಿಮಂಗಳೂರುಸುಹಾಸ್ ಶೆಟ್ಟಿ ಹತ್ಯೆ ಪ್ರಕರವನ್ನು ಎನ್‌ಐ‌ಎ ಗೆ ವಹಿಸುವಂತೆ ಸಂಸದ ಬ್ರಿಜೇಶ್ ಚೌಟ ಮನವಿ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರವನ್ನು ಎನ್‌ಐ‌ಎ ಗೆ ವಹಿಸುವಂತೆ ಸಂಸದ ಬ್ರಿಜೇಶ್ ಚೌಟ ಮನವಿ

- Advertisement -
- Advertisement -

ಮಂಗಳೂರು; ಬಜ್ಪೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಸುಹಾಸ್ ಶೆಟ್ಟಿ ಪ್ರಕರಣವನ್ನು ಎನ್‌ಐ‌ಎ ಗೆ ವಹಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ  ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಬಳಿ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಗುರಿಯಾಗಿಸಿ ಹತ್ಯೆಯನ್ನು ಮಾಡುವ ಪ್ರವೃತ್ತಿ ಹೆಚ್ಚಾಗುತ್ತವೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಅವರನ್ನು ಗುರಿ ಇಟ್ಟು ನಡೆಸಿದ ಹತ್ಯೆಯ ರೀತಿಯಲ್ಲಿಯೇ ಈ ಘಟನೆಯು ನಡೆದಿದೆ. ಈ ರೀತಿಯ ಹತ್ಯೆಯು ಈ ಪ್ರದೇಶದಲ್ಲಿ ಪಿಎಫ್‌ಐ ನಂತಹ ಇಸ್ಲಾಮಿಕ್ ಮೂಲಭೂತವಾದಿ ಸಂಘಟನೆಗಳು ಇನ್ನೂ ಸ್ಲೀಪರ್ ಸೆಲ್‌‌ಗಳಂತೆ ಜೀವಂತವಾಗಿರುವುದನ್ನು ಸ್ಪಷ್ಟ ಪಡಿಸುತ್ತದೆ.

ಎಂದಿನಂತೆ ಹಿಂದೂ ಕಾರ್ಯಕರ್ತರ ಹತ್ಯೆಗಳನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಗಂಭೀರವಾಗಿ ಪರಿಗಣಿಸುತ್ತದೆ ಎಂಬ ಭರವಸೆ ಇಲ್ಲದೆ, ನಾನು ಗೌರವಾನ್ವಿತ ಗೃಹ ಸಚಿವರಾದ ಶ್ರೀ ಅಮಿತ್ ಶಾ ಜೀ ಅವರಲ್ಲಿ ಪ್ರಕರಣವನ್ನು ಎನ್ಐಎಗೆ ವರ್ಗಾಯಿಸಿ ಮಧ್ಯಪ್ರವೇಶಿಸುವಂತೆ ವಿನಂತಿಸಿದ್ದೇನೆ.

ನಮಗೆ ಸಂಪೂರ್ಣ, ನಿಷ್ಪಕ್ಷಪಾತವಾದ ತನಿಖೆಯ ಅಗತ್ಯವಿದ್ದು ಈ ವಿಷಯದಲ್ಲಿ ನೀವು ವೈಯಕ್ತಿಕವಾಗಿ ಮಧ್ಯಪ್ರವೇಶಿಸಿ ಅಪರಾಧಿಗಳನ್ನು ಮಾತ್ರವಲ್ಲದೆ ಅವರಿಗೆ ಬೆಂಬಲ ನೀಡಿದ ಮತ್ತು ಹಣಕಾಸು ಒದಗಿಸಿದ ಎಲ್ಲರಿಗೂ ತಕ್ಕ ಪಾಠ ಕಲಿಸಬೇಕು.ಭಾರತ ಎಂದೆಂದಿಗೂ ಇಂತಹ ದುಷ್ಟ ಶಕ್ತಿಗಳನ್ನು ಸಹಿಸುವುದಿಲ್ಲ ಎಂದು ಅವರು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

- Advertisement -

Latest News

error: Content is protected !!