- Advertisement -
![]()
- Advertisement -
ಬೆಳ್ತಂಗಡಿ : ಕರ್ನಾಟಕ ರಾಜ್ಯ ಸರ್ಕಾರದ ಕೃಷಿ ಸಚಿವ ಚೆಲುವರಾಯ ಸ್ವಾಮಿ ರವರು ಬೆಳ್ತಂಗಡಿ ತಾಲೂಕಿನ ಪ್ರವಾಸ ಕೈಗೊಂಡಿದ್ದಾರೆ. ಮೇ.4 ರಂದು ಸಂಜೆ ಶಿರಾಡಿ ಘಾಟಿ ಮೂಲಕ ಬೆಳ್ತಂಗಡಿ ತಾಲೂಕಿನ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಸ್ಥಳ ವಸತಿ ಗೃಹಕ್ಕೆ ತೆರಳಿದರು. ಮೇ.5 ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಶಾಸಕ , ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ , ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ,ಯುವ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷರು ಅಝರ್,ಯುವ ಕಾಂಗ್ರೆಸ್ ವಿಧಾನ ಸಭಾ ಉಪಾಧ್ಯಕ್ಷರು ಅರುಣ್ ಲೋಬೊ,ನವೀನ್ ಗೌಡ, ಗಣೇಶ್ ಕಾಣಿಯೂರು, ಸೇಬಸ್ಟಿನ್ ಮತ್ತಿತರರು ಭಾಗಿಯಾಗಿದ್ದರು.
- Advertisement -


