Wednesday, June 3, 2026
Homeಮನರಂಜನೆನಟ ರಿಯಲ್ ಸ್ಟಾರ್ ಉಪೇಂದ್ರ ಆಸ್ಪತ್ರೆಗೆ ದಾಖಲು

ನಟ ರಿಯಲ್ ಸ್ಟಾರ್ ಉಪೇಂದ್ರ ಆಸ್ಪತ್ರೆಗೆ ದಾಖಲು

- Advertisement -
- Advertisement -

ಬೆಂಗಳೂರು ; ನಟ ರಿಯಲ್ ಸ್ಟಾರ್ ಉಪೇಂದ್ರ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟ, ನಿರ್ದೇಶಕ ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೇ 5ರಂದು ಮಧ್ಯಾಹ್ನದ ವೇಳೆಗೆ ಓವರ್‌ ಅಸಿಡಿಟಿಯಿಂದ ಬಳಲುತ್ತಿದ್ದ ಅವರು ಪ್ರಾಥಮಿಕ ಚಿಕಿತ್ಸೆಗಳನ್ನು ಮನೆಯಲ್ಲೇ ತೆಗೆದುಕೊಂಡಿದ್ದರೂ ಗುಣಮುಖವಾಗದ ಕಾರಣ, ತಮ್ಮ ನಿವಾಸಕ್ಕೆ ಬಳಿ ಇರುವ ಸ್ಪರ್ಶ್ ಆಸ್ಪತ್ರೆಗೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ದಾಖಲಾಗಿದ್ದಾರೆ.

ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. ಯುಐ ಸಿನಿಮಾ ಚಿತ್ರೀಕರಣ ಸಂದರ್ಭದಲ್ಲೂ ಇದೇ ರೀತಿ ಆಗಿತ್ತು. ಉಪ್ಪಿ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ಅಭಿಮಾನಿಗಳು ಗಾಬರಿಪಡುವ ಅವಶ್ಯಕತೆಯಿಲ್ಲ ಅಂತ ಆಪ್ತ ಮೂಲಗಳು ತಿಳಿಸಿವೆ.

- Advertisement -

Latest News

error: Content is protected !!