Saturday, June 6, 2026
Homeಕರಾವಳಿಮಂಗಳೂರುಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಬಜಪೆ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಭಾಗಿಯಾಗಿರುವ ಅನುಮಾನ ಇದೆ;...

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಬಜಪೆ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಭಾಗಿಯಾಗಿರುವ ಅನುಮಾನ ಇದೆ; ಹಿಂದೂ ಜಾಗರಣ ವೇದಿಕೆ ಪ್ರಾಂತ ಪ್ರಮುಖ್ ಕೆ.ಟಿ. ಉಲ್ಲಾಸ್ ಆರೋಪ

- Advertisement -
- Advertisement -

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಬಜಪೆ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಭಾಗಿಯಾಗಿರುವ ಅನುಮಾನ ಇದೆ ಎಂದು ಹಿಂದೂ ಜಾಗರಣ ವೇದಿಕೆ ಪ್ರಾಂತ ಪ್ರಮುಖ್ ಕೆ.ಟಿ. ಉಲ್ಲಾಸ್ ಆರೋಪ ಮಾಡಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ಬಜಪೆ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಒಬ್ಬರು ತೊಂದರೆ ಕೊಡುತ್ತಿದ್ದ ಬಗ್ಗೆ ಸುಹಾಸ್ ಸ್ನೇಹಿತರ ಬಳಿ ಹೇಳಿಕೊಂಡಿದ್ದ. ಸುಹಾಸ್ ತಾಯಿ ಕೂಡ ಈ ವಿಷಯ ಹೇಳಿದ್ದಾರೆ. ಈ ಹೆಡ್ ಕಾನ್‌ಸ್ಟೇಬಲ್ ಅವರನ್ನು ವಿಚಾರಣೆಗೆ ಒಳಪಡಿಸಬೇಕು. ಸುಹಾಸ್ ಯಾವುದೇ ಆಯುಧ ಇಟ್ಟುಕೊಂಡು ಓಡಾಡದಂತೆ ಪೊಲೀಸ್ ಇಲಾಖೆ ಸೂಚನೆ ನೀಡಿತ್ತು. ಕೊಲೆಯಾಗುವ ಮೂರು ದಿನ ಮೊದಲಿನಿಂದ ಸುಹಾಸ್ ಬಳಿ ಯಾವುದೇ ಆಯುಧ ಇರಲಿಲ್ಲ ಎಂಬ ಸಂಗತಿ ಕೊಲೆ ಆರೋಪಿಗಳಿಗೆ ತಲುಪಿದ್ದಾದರೂ ಹೇಗೆ ಎಂದು ಪ್ರಶ್ನಿಸಿದ ಅವರು, ಬಜಪೆ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಅನ್ನು ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನು ಇದೇ ವೇಳೆ ಮಾತನಾಡಿದ ಅವರು  ಪಿಎಫ್‌ಐನ ಟಾರ್ಗೆಟೆಡ್ ಕಿಲ್ಲಿಂಗ್ ಈ ಪ್ರಕರಣದಲ್ಲೂ ನಡೆದಿದೆ. ಸುಖಾನಂದ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ನೌಷಾದ್ ಈ ಪ್ರಕರಣಕ್ಕೆ ಫಂಡಿಂಗ್ ಮಾಡಿದ್ದಾನೆ. ಘಟನಾ ಸ್ಥಳದಲ್ಲಿ ಪಿಎಫ್‌ಐ ಕಾರ್ಯಕರ್ತರು ಇದ್ದರು ಎನ್ನುವ ಬಲವಾದ ಮಾಹಿತಿಯಿದೆ. ಆದ್ದರಿಂದ ಪ್ರಕರಣದ ತನಿಖೆಯನ್ನು ಎನ್‌ಐಎಗೆ ಒಪ್ಪಿಸಬೇಕು ಎಂದಿದ್ದಾರೆ.ಕಳಸದ ರಂಜಿತ್ ಮತ್ತು ನಾಗರಾಜ್‌ನನ್ನು ಸುಳ್ಳು ಹೇಳಿ ಕರೆಸಿ ಕೃತ್ಯದಲ್ಲಿ ಶಾಮೀಲು ಮಾಡಿಸಿದ್ದಾರೆ. ಹಿಂದೂಗಳು ಇರುವ ಕಾರಣ ಪ್ರಕರಣಕ್ಕೆ ಎನ್‌ಐಎ ಆ್ಯಂಗಲ್ ಬರಬಾರದು ಎಂದು ಈ ಉಪಾಯ ಮಾಡಿದ್ದಾರೆ. ನಮಗೆ ರಾಜ್ಯ ಪೊಲೀಸರ ಸಾಮರ್ಥ್ಯದ ಬಗ್ಗೆ ಅನುಮಾನ ಇಲ್ಲ; ಆದರೆ ಸಿಎಂ, ಡಿಸಿಎಂ ಗೃಹ ಸಚಿವರ ಬಗ್ಗೆ ನಂಬಿಕೆ ಇಲ್ಲ ಎಂದು ಕೆ.ಟಿ. ಉಲ್ಲಾಸ್ ಹೇಳಿದ್ದಾರೆ.

- Advertisement -

Latest News

error: Content is protected !!