Thursday, June 4, 2026
Homeತಾಜಾ ಸುದ್ದಿಬಿಜೆಪಿ ಪಕ್ಷವೇ ಸುಹಾಸ್‌ ಶೆಟ್ಟಿ ವಿರುದ್ಧ ರೌಡಿಶೀಟರ್‌ ಓಪನ್‌ ಮಾಡಿದ್ದು; ದಿನೇಶ್‌ ಗುಂಡೂರಾವ್‌ ವಾಗ್ದಾಳಿ

ಬಿಜೆಪಿ ಪಕ್ಷವೇ ಸುಹಾಸ್‌ ಶೆಟ್ಟಿ ವಿರುದ್ಧ ರೌಡಿಶೀಟರ್‌ ಓಪನ್‌ ಮಾಡಿದ್ದು; ದಿನೇಶ್‌ ಗುಂಡೂರಾವ್‌ ವಾಗ್ದಾಳಿ

- Advertisement -
- Advertisement -

ಬೆಂಗಳೂರು: ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ವಿರುದ್ಧ ರೌಡಿಶೀಟರ್‌ ಓಪನ್‌ ಮಾಡಿದ್ದೇ ಬಿಜೆಪಿ ಸರ್ಕಾರ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ವಾಗ್ದಾಳಿ ಮಾಡಿದ್ದಾರೆ.

ಅವರು ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ, ‘ಬಿಜೆಪಿ ಸರ್ಕಾರವೇ ಸುಹಾಸ್ ಶೆಟ್ಟಿಯನ್ನ ರೌಡಿಶೀಟರ್ ಆಗಿ ಮಾಡಿದ್ದು. 2020ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದ ಸಂದರ್ಭದಲ್ಲಿ ಸುಹಾಸ್ ಶೆಟ್ಟಿಯನ್ನು ರೌಡಿಶೀಟರ್ ಪಟ್ಟಿಗೆ ಸೇರಿಸಿದ್ದರು. ಬಿಜೆಪಿಯವರೇ ನಿಜವಾದ ಕ್ರಿಮಿನಲ್‌ ಸೃಷ್ಟಿಕರ್ತರು. ಇವರು ಅಧಿಕಾರದಲ್ಲಿದ್ದಾಗ ಕ್ರಿಮಿನಲ್‌ಗಳನ್ನು ಸೃಷ್ಟಿಸುತ್ತಾರೆ. ಅವರ ಮೇಲೆ ರೌಡಿ ಶೀಟರ್‌ ತೆರೆಯುತ್ತಾರೆ. ಹೆಣ ಬಿದ್ದ ಕೂಡಲೇ ಕ್ರಿಮಿನಲ್‌ಗಳನ್ನು ಮಹಾತ್ಮರಂತೆ ಬಿಂಬಿಸಿ ಹುತಾತ್ಮರನ್ನಾಗಿ ಮಾಡುತ್ತಾರೆ,’ ಎಂದು ಕಿಡಿಕಾರಿದರು.

ಬಿಜೆಪಿ ಪಕ್ಷ ಹುನ್ನಾರವನ್ನು ಕರಾವಳಿಯ ಜನ ಅರಿಯಬೇಕಿದೆ. ಇಲ್ಲವಾದಲ್ಲಿ ಬಿಜೆಪಿಯವರ ಕೆಟ್ಟ ರಾಜಕಾರಣಕ್ಕೆ ಜಿಲ್ಲೆಯ ನೆಮ್ಮದಿಯೇ ಹಾಳಾಗುವಂತಾಗುತ್ತದೆ ಎಂದು ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ.

- Advertisement -

Latest News

error: Content is protected !!