ನವ ವಿವಾಹಿತೆಯ ಸಿಂಧೂರ ಅಳಿಸಿದ ಪಾಪಿಗಳಿಗೆ ಮಾಡಿದ ಭಾರತೀಯ ಯೋಧರು ರಕ್ತ ಅಭಿಷೇಕವನ್ನೇ ಮಾಡಿದ್ದಾರೆ. ಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ಭಾರತ ಕೊನೆಗೂ ಪ್ರತೀಕಾರ ತೀರಿಸಿಕೊಂಡಿದೆ. ರಾತ್ರೀ ರಾತ್ರಿ ಪಾಕಿಸ್ತಾನದ 9 ಉಗ್ರರ ಅಡಗುತಾಣಗಳ ಮೇಲೆ ಸಸ್ಪೆನ್ಸ್ ದಾಳಿ ನಡೆಸಿದ್ದು, ಸುಮಾರು 70ಕ್ಕೂ ಹೆಚ್ಚು ಉಗ್ರರನ್ನು ಹತ್ಯೆಗೈದಿದೆ.
ಭಾರತ ನಡೆಸಿದ ಈ ದಾಳಿಯಲ್ಲಿ ಲಷ್ಕರ್ ಉಗ್ರ ಹಫೀಜ್ ಸಯಿದ್‌ಗೆ ಸಂಬಂಧಿಸಿದ ಮರ್ಕಜ್ ಸುಭಾನಲ್ಲಾಹ್ ಮಸೀದಿ ಧ್ವಂಸವಾಗಿದೆ. ಸುಮಾರು 18 ವಿಸ್ತೀರ್ಣ ಪ್ರದೇಶದಲ್ಲಿ ನಿರ್ಮಾಣವಾಗಿದ್ದ ಈ ಮಸೀದಿ ಆವರಣದಲ್ಲಿ ಉಗ್ರ ಚಟುವಟಿಕೆಗಳು ನಡೆಯುತ್ತಿತ್ತು ಎಂದು ಉನ್ನತ ಮೂಲಗಳು ತಿಳಿಸಿವೆ..
–
ಮಂಗಳವಾರ ಮೇ 6 ಗಡಿಯಲ್ಲಿ ಸಮಾರಾಭ್ಯಾಸ ನಡೆಸುತ್ತಿದ್ದ ಭಾರತೀಯ ಸೇನೆ ತಡರಾತ್ರಿ 1:44ರ ವೇಳೆ ರಫೇಲ್, ಮಿರಾಜ್-2000 ಮತ್ತು ಸುಖೋಯ್-30 ಸೇರಿದಂತೆ ಇತರ ಯುದ್ಧ ವಿಮಾನಗಳನ್ನ ಬಳಸಿ ಪಾಕ್ ಉಗ್ರತಾಣಗಳ ಮೇಲೆ ದಾಳಿ ಮಾಡಿದೆ. ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಭಾರತ ತಡರಾತ್ರಿ 1:44ಕ್ಕೆ ದಾಳಿ ನಡೆಸಿದೆ. ರಫೇಲ್ ಯುದ್ಧ ವಿಮಾನಗಳನ್ನು ಬಳಸಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ಏರ್ ಸ್ಟ್ರೈಕ್ ನಡೆಸಿದೆ.


