ಲಾಹೋರ್; ಆಪರೇಷನ್ ಸಿಂದೂರ್ ಕಾರ್ಯಾಚರಣೆ ಮೂಲಕ ಪೆಹಲ್ಗಾಮ್ ದಾಳಿಗೆ ಭಾರತ ಪ್ರತಿಕಾರ ತೀರಿಸಿಕೊಂಡ ಬೆನ್ನಲ್ಲೇ ಪಾಕಿಸ್ತಾನದ ಲಾಹೋರ್‌ನಲ್ಲಿ ಗುರುವಾರ ಮುಂಜಾನೆ ಸರಣಿ ಸ್ಫೋಟಗಳು ಸಂಭವಿಸಿದೆ. ಆಪರೇಷನ್ ಸಿಂದೂರ ಮೂಲಕ ಪಾಕಿಸ್ತಾನದ 9 ಭಯೋತ್ಪಾದಕ ಅಡಗುತಾಣಗಳನ್ನು ಭಾರತೀಯ ಸೇನೆ ಉಡೀಸ್ ಮಾಡಿದ ಪರಿಣಾಮ 70ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದರು. ಅದರ ಬೆನ್ನಲ್ಲೇ ಇಂದು ಮುಂಜಾನೆ ಸರಣಿ ಸ್ಫೋಟವಾಗಿದೆ.
ಗುರುವಾರ ಬೆಳಿಗ್ಗೆ ಪಾಕಿಸ್ತಾನದ ಲಾಹೋರ್‌ನಲ್ಲಿ ಸರಣಿ ಸ್ಫೋಟಗಳ ಶಬ್ದ ವೇಳೆ ಸೈರನ್‌ಗಳು ಕೇಳುತ್ತಿದ್ದಂತೆ ಜನರು ಜೀವ ಭಯದಿಂದ ದಿಕ್ಕಾಪಾಲಾಗಿ ಓಡಿದ್ದಾರೆ ಎನ್ನಲಾಗಿದೆ. ಇನ್ನು ಇಲ್ಲಿನ ಸ್ಥಳೀಯ ಮಾಧ್ಯಮಗಳ ವರದಿಯಂತೆ ಲಾಹೋರ್‌ನ ನಸೀರಾಬಾದ್ ಸೇರಿದಂತೆ ಎರಡು ಪ್ರದೇಶಗಳಲ್ಲಿ ಸ್ಫೋಟದ ಶಬ್ದ ಕೇಳಿಬಂದಿದೆ. ಈ ವೇಳೆ ಭಯಭೀತರಾದ ಜನ ತಮ್ಮ ಪ್ರಾಣ ಉಳಿಸಿಕೊಳ್ಳುವ ಭಯದಲ್ಲಿ ಮನೆಯಿಂದ ಹೊರ ಓಡಿ ಬಂದಿದ್ದಾರೆ ಅಲ್ಲದೆ ಸ್ಫೋಟದಿಂದ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದೆ ಎನ್ನಲಾಗಿದೆ. ಸ್ಫೋಟಕ್ಕೆ ಕಾರಣ ತಿಳಿದು ಬಂದಿಲ್ಲ.


