Thursday, June 4, 2026
HomeWorldಭಾರತ-ಪಾಕಿಸ್ತಾನ ನಡುವೆ ಮಧ್ಯಸ್ಥಿಕೆ ಸಿದ್ಧ: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆ

ಭಾರತ-ಪಾಕಿಸ್ತಾನ ನಡುವೆ ಮಧ್ಯಸ್ಥಿಕೆ ಸಿದ್ಧ: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆ

- Advertisement -
- Advertisement -

ವಾಷಿಂಗ್ಟನ್​ : ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎರಡು ರಾಷ್ಟ್ರಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ಮಧ್ಯಸ್ಥಿಕೆ ವಹಿಸಲು ಸಿದ್ಧವಾಗಿರುವುದಾಗಿ ಹೇಳಿದ್ದಾರೆ.

ಅವರು ಓವಲ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಭಾರತ ಮತ್ತು ಪಾಕಿಸ್ತಾನ ತಕ್ಷಣವೇ ಪರಸ್ಪರ ದಾಳಿ ಮಾಡುವುದನ್ನು ನಿಲ್ಲಿಸಬೇಕು, ನಾವು (ಅಮೆರಿಕ) ಉಭಯ ದೇಶಗಳೊಂದಿಗೂ ಚೆನ್ನಾಗಿ ಹೊಂದಿಕೊಳ್ಳುತ್ತೇವೆ. ಜೊತೆಗೆ ನನಗೆ ಎರಡು ದೇಶಗಳು ಚೆನ್ನಾಗಿ ಗೊತ್ತು. ಹಾಗಾಗಿ, ಈ ವಿಷಯವನ್ನು ಇಬ್ಬರು ಸರಿಯಾಗಿ ನಿಭಾಯಿಸುತ್ತಾರೆ ಎನ್ನುವ ವಿಶ್ವಾಸವಿದ್ದು, ಎರಡು ರಾಷ್ಟ್ರಗಳು ಪರಸ್ಪರ ದಾಳಿ ಮಾಡುವುದನ್ನು ನಿಲ್ಲಿಸಬೇಕು. ಜೊತೆಗೆ, ನಾವು ಎರಡು ದೇಶಗಳೊಂದಿಗೂ ಉತ್ತಮ ಸಂಬಂಧವನ್ನು ಹೊಂದಿದ್ದೇವೆ. ಹಾಗಾಗಿ, ಏನಾದರೂ ಸಹಾಯ ಮಾಡಲು ಸಾಧ್ಯವಾದರೆ ಖಂಡಿತ ಮಾಡುತ್ತೇನೆ,’ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!