Friday, June 5, 2026
Homeಕರಾವಳಿಮಂಗಳೂರುವಿಟ್ಲ: ಗೇಟ್ ಗೆ ಬೀಗ ಹಾಕಿದ್ದನ್ನು ಪ್ರಶ್ನಿಸಿದ ಮಹಿಳೆಗೆ ಗುಪ್ತಾಂಗ ತೋರಿಸಿದ ಗ್ರಾಮ ಪಂಚಾಯತ್ ಉಪಾಧ್ಯಕ್ಷ

ವಿಟ್ಲ: ಗೇಟ್ ಗೆ ಬೀಗ ಹಾಕಿದ್ದನ್ನು ಪ್ರಶ್ನಿಸಿದ ಮಹಿಳೆಗೆ ಗುಪ್ತಾಂಗ ತೋರಿಸಿದ ಗ್ರಾಮ ಪಂಚಾಯತ್ ಉಪಾಧ್ಯಕ್ಷ

- Advertisement -
- Advertisement -

ವಿಟ್ಲ: ಮನೆಗೆ ಹೋಗುವ ರಸ್ತೆಯಲ್ಲಿ ಗೇಟ್‌ಗೆ ಬೀಗ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಮಹಿಳೆಗೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗುಪ್ತಾಂಗ ತೋರಿಸಿದ ಘಟನೆ ಇಡ್ಕಿದು ಗ್ರಾಮದ ಕೊಪ್ಪ ಎಂಬಲ್ಲಿ ನಡೆದಿದೆ. ಪದ್ಮನಾಭ ಸಪಲ್ಯ ಅಸಭ್ಯವಾಗಿ ವರ್ತಿಸಿದ ಗ್ರಾಮ ಪಂಚಾಯತ್‌ ಉಪಾಧ್ಯಕ್ಷ.

ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ತನ್ನ ಮನೆಗೆ ಬರುವ ದಾರಿಯಲ್ಲಿ ಯಾರೋ ಕೆಲಸ ಮಾಡುವ ಶಬ್ದ ಕೇಳಿದ ಹಿನ್ನೆಲೆ ಸ್ಥಳಕ್ಕೆ ತೆರಳಿ ವಿಡಿಯೋ ಮಾಡಿದ್ದಾರೆ. ಇದನ್ನು ನೋಡಿದ ಆರೋಪಿ ಪದ್ಮನಾಭ ತಾನು ಧರಿಸಿದ್ದ ಚಡ್ಡಿ ಜಾರಿಸಿ ಗುಪ್ತಾಂಗ ತೋರಿಸುವ ವಿಕೃತಿ ಮೆರೆದಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ.

ಈ ಕುರಿತು ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿದೆ. ಭಾರತೀಯ ನ್ಯಾಯ ಸಂಹಿತೆ BNS 2023 u/s 79 ರಂತೆ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ

- Advertisement -

Latest News

error: Content is protected !!