Tuesday, June 9, 2026
Homeಕರಾವಳಿಮಂಗಳೂರುಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಿಗೆ ನ್ಯಾಯಾಂಗ ಬಂಧನ

ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಿಗೆ ನ್ಯಾಯಾಂಗ ಬಂಧನ

- Advertisement -
- Advertisement -

ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ 8 ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಆರೋಪಿಗಳಾದ ಅಬ್ದುಲ್ ಸಫ್ವಾನ್, ನಿಯಾಜ್, ಮೊಹಮ್ಮದ್ ಮುಸಮ್ಮೀoರ್, ಕಲಂದರ್ ಶಾಫಿ, ಆದಿಲ್ ಮೆಹರೂಫ್, ನಾಗರಾಜ್ ಎಂ., ಮೊಹಮ್ಮದ್ ರಿಜ್ವಾನ್ ಮತ್ತು ರಂಜಿತ್‌ನನ್ನು ಶುಕ್ರವಾರ ಮಂಗಳೂರಿನ ನ್ಯಾಯಾಲಯಕ್ಕೆ ಹಾಜರುಪಡಿಸಿ ಅನಂತರ ನ್ಯಾಯಾಲಯದ ಆದೇಶದಂತೆ ನ್ಯಾಯಾಂಗ ಬಂಧನಕ್ಕಾಗಿ ಮಂಗಳೂರು ಕಾರಾಗೃಹಕ್ಕೆ ಕಳುಹಿಸಲಾಯಿತು.

ಪ್ರಕರಣದಲ್ಲಿ 8 ಮಂದಿ ನೇರವಾಗಿ ಪಾಲ್ಗೊಂಡಿದ್ದು ಇತರ ಇಬ್ಬರು ಸುಹಾಸ್‌ನ ಚಲನವಲನದ ಬಗ್ಗೆ ಮಾಹಿತಿ ನೀಡುತ್ತಿದ್ದರು. ಅವರ ಬಂಧನ ಬಾಕಿ ಇದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಮಾಹಿತಿ ನೀಡಿದ್ದರು. ಆ ಪ್ರಕಾರ ಇನ್ನೂ ಇಬ್ಬರು ಆರೋಪಿಗಳ ಬಂಧನವಾಗಬೇಕಿದೆ.

- Advertisement -

Latest News

error: Content is protected !!